ದಿನದ ಸುದ್ದಿ
Live updates: ವಾಜಪೇಯಿ ಆರೋಗ್ಯ ವಿಚಾರಿಸಿದ ಮೋದಿ
ಸುದ್ದಿದಿನ ಡೆಸ್ಕ್: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬುಧವಾರರ ರಾತ್ರಿ ಆಸ್ಪತ್ರೆಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ವಾಜಪೇಯಿ ಅವರ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆಸ್ಪತ್ರೆಗೆ ಭೇಟಿ ನೀಡಿದ್ದರು. ವಾಜಪೇಯಿ ಅವರಿಗಾಗಿ ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಇನ್ನು ವಾಜಪೇಯಿ ಅವರ ಆರೋಗ್ಯ ಶೀಘ್ರವೇ ಸುಧಾರಿಸಲೆಂದು ಗ್ವಾಲಿಯರ್ ನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಪ್ರಾರ್ಥಿಸುತ್ತಿದ್ದಾರೆ.