ದಿನದ ಸುದ್ದಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ; ಅರ್ಜಿ ಆಹ್ವಾನ

Published

on

ಸುದ್ದಿದಿನ ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಎನ್‌ಎಂಡಿಎಫ್‌ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ’ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಠಿತ ಐಐಟಿಎಸ್, ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು kmdconline.karnataka.gov.in ನ ಜಾಲತಾಣ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರವಾರ, ಇಲ್ಲಿಗೆ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version