ದಿನದ ಸುದ್ದಿ

ಕರ್ನಾಟಕ ಮರಾಠ ಸಮುದಾಯಗಳಿಗೆ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯಗಳ ವಿವರ : ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಅರ್ಹತೆ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version