ದಿನದ ಸುದ್ದಿ

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

Published

on

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು.

ಸಮಾರಂಭ ಉದ್ದೇಶಿಸಿ ಮಾತನಾಡಿದ ಜಯಂತ್ ಚೌಧರಿ, ಈ ಯೋಜನೆಯು ದೇಶದ ಮಾನವ ಸಂಪನ್ಮೂಲವನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ದೇಶಾದ್ಯಂತ 25 ಸಾವಿರ ಯುವಕರಿಗೆ ಶಿಕ್ಷಣ ಮತ್ತು ಕೌಶಲ್ಯ ಹೆಚ್ಚಿಸುವ ಅವಕಾಶಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ 1.5 ಲಕ್ಷ ರೂಪಾಯಿಗಳಷ್ಟಿದ್ದ ಸಾಲದ ಮೊತ್ತದ ಮಿತಿಯನ್ನು ನೂತನ ಯೋಜನೆಯಡಿ 7.5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅನೇಕ ಶೆಡ್ಯೂಲ್ಡ್ ಬ್ಯಾಂಕ್‌ಗಳು, ಎನ್‌ಬಿಎಫ್‌ಸಿ ಮತ್ತು ಗ್ರಾಮೀಣ ಬ್ಯಾಂಕ್‌ಗಳನ್ನು ಈ ಯೋಜನೆಗೆ ಸೇರಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೇ ಸಾಲ ದೊರೆಯಲಿದೆ. ಈ ಯೋಜನೆಯ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು2024-25ರ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version