ದಿನದ ಸುದ್ದಿ
ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ಹಾವೇರಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಮಡಿವಾಳ ಸಮಾಜದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ಸಮುದಾದಯವರು ಅರ್ಜಿ ನಮೂನೆಗಳನ್ನು ಉಚಿತವಾಗಿ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಪಡೆದು, ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಭಾವಚಿತ್ರ, ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿ, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಆಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ನಿಗಮದ ವೆಬ್‍ಸೈಟ್ ಮೂಲಕ ಸಲ್ಲಿಸಬೇಕು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯಗದೇ ಇದ್ದಲ್ಲಿ ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಯೊಂದಿಗೆ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ದಿನಾಂಕ 31-08-2020ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ ಸಂಪರ್ಕಿಸಬಹುದೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243