ದಿನದ ಸುದ್ದಿ
ಜುಲೈ 5 ರಿಂದ ಮತ್ತೆ ಲಾಕ್ ಡೌನ್
ಸುದ್ದಿದಿನ,ಬೆಂಗಳೂರು: ಜುಲೈ 5 ರಿಂದ ಆಗಸ್ಟ್ 2ರವರೆಗೆ ಪ್ರತಿ ಭಾನುವಾರ ಲಾಕ್‍ಡೌನ್ ಮಾಡಲಾಗುವುದು ಎಂದು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಇನ್ನು ಸರ್ಕಾರಿ ನೌಕರರಿಗೆ 2020 ಜುಲೈ 10 ರಿಂದ ಆಗಸ್ಟ್ 8ರವರಗೆ ಪ್ರತಿ ಶನಿವಾರ ರಜೆ ಸಿಗಲಿದೆ.
ರಾಜ್ಯದ್ಯಾಂತ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕಫ್ರ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಿದೆ.
ನೈಟ್ ಕರ್ಫ್ಯೂನಲ್ಲಿ ಏನಿರುತ್ತೆ?
- ಆಸ್ಪತ್ರೆ ಸೇವೆಗಳು, ಮೆಡಿಕಲ್ ಸ್ಟೋರ್ಸ್ ಇರುತ್ತವೆ
- ಅಗತ್ಯ ವಸ್ತು ಸೇವೆಗಳಿಗೆ ನಿರ್ಬಂಧ ಇರಲ್ಲ
- ಹಾಲು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಇರ್ತವೆ
- ಅಗತ್ಯ ವಸ್ತು/ ಸೇವೆಗಳ ವಾಹನಗಳ ಸಂಚಾರ ಇರುತ್ತೆ
- ಕೊರೋನಾ ವಾರಿಯರ್ಸ್ ವಾಹನ ಸಂಚಾರ, ಓಡಾಟಕ್ಕೆ ಅವಕಾಶ ಇರುತ್ತೆ
ನೈಟ್ ಕರ್ಫ್ಯೂನಲ್ಲಿ ಏನಿರಲ್ಲ?
- ಮಾಲ್‍ಗಳು, ಸೂಪರ್ ಮಾರ್ಕೆಟ್‍ಗಳು ಬಂದ್
- ದೇವಸ್ಥಾನ, ಮಸೀದಿ, ಚರ್ಚ್ ಬಂದ್
- ಮದ್ಯದ ಅಂಗಡಿಗಳು, ಬಾರ್ ಗಳು ಬಂದ್
- ಹೋಟೆಲ್ ಡೈನಿಂಗ್, ರೆಸ್ಟೋರೆಂಟ್ ಬಂದ್
- ಖಾಸಗಿ ವಾಹನ ಸಂಚಾರ, ಓಡಾಟ ಬಂದ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


