Connect with us

ದಿನದ ಸುದ್ದಿ

ಲಾಕ್ ಡೌನ್ 5.0 | ಕೇಂದ್ರ ಸರ್ಕಾರ ಹೇಳಿದ್ದೇನು..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಲಾಕ್‍ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಪ್ರಮುಖ ಹತ್ತು ನಿರ್ದೇಶನಗಳನ್ನು ತಿಳಿಸಿದೆ.

ಲಾಕ್‍ಡೌನ್ 5.0ನಲ್ಲಿ ಪ್ರಮುಖವಾಗಿ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಈಗಾಗಲೇ ಕಂಪನಿ, ಕೈಗಾರಿಕೋದ್ಯಮ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ವಿಧಿಸಿದೆ.

ಕೋವಿಡ್-19 ನಿಯಂತ್ರಣಕ್ಕೆ ನಿರ್ದೇಶನಗಳು

  1. ಮಾಸ್ಕ್: ಸಾರ್ವಜನಿಕ ಸ್ಥಳದಲ್ಲಿ, ಕಚೇರಿಯ ಒಳಗೆ, ಪ್ರಯಾಣದ ವೇಳೆ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  2. ಸಾಮಾಜಿಕ ಅಂತರ: ಒಬ್ಬೊರಿಂದ ಮತ್ತೊಬ್ಬರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
  3. ಸಭೆ-ಸಮಾರಂಭ: ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಭೆ ಸಮಾರಂಭ ನಡೆಸುವಂತಿಲ್ಲ. ಮದುವೆಯಲ್ಲಿ 50ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಅತ್ಯಕ್ರಿಯೆ, ಅಂತಿಮನ ನಮನದ ವೇಳೆ 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ.
  4. ದಂಡ: ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತಾಧಿಕಾರಿಗಳ ಸೂಚನೆಯಂತೆ ದಂಡ ವಿಧಿಸುವಂತೆ ಸೂಚಿಸಲಾಗಿದೆ.
  5. ನಿಷೇಧ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಕುಡಿಯುವುದು, ಪಾನ್, ಗುಟ್ಕಾ, ತಂಬಾಕು ತಿನ್ನುವುದು, ಸಿಗರೇಟ್ ಸೇದುವುದು ನಿಷೇಧ.
  6. ವರ್ಕ್ ಫ್ರಂ ಹೋಮ್: ಕಂಪನಿಗಳು, ಸಂಸ್ಥೆಗಳು ಸಾಧ್ಯವಾದಷ್ಟು ವರ್ಕ್ ಫ್ರಂ ಹೋಮ್ ಅನುಸರಿಸಬೇಕು.
  7. ಮುಂಜಾಗ್ರತಾ ಕ್ರಮ: ಕೆಲಸ ಅಥವಾ ವ್ಯವಹಾರದ ಸಮಯದಲ್ಲಿ ಅಧಿಕಾರಿಗಳು, ಕೆಲಸದ ಸ್ಥಳ, ಅಂಗಡಿ, ಮಾರುಕಟ್ಟೆ, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
  8. ಸ್ಕ್ರೀನಿಂಗ್: ಕಂಪನಿ, ವ್ಯವಹಾರದ ಸ್ಥಳಗಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಇರಲೇಬೇಕು. ಜೊತೆಗೆ ಸಿಬ್ಬಂದಿ ಒಳಗೆ ಹಾಗೂ ಹೊರಗೆ ಹೋಗುವ ಜಾಗದಲ್ಲಿ ಸ್ಯಾನಿಟೈಜರ್ ಇರಿಸಬೇಕು.
  9. ಸ್ಯಾನಿಟೈಜೇಷನ್: ಕಚೇರಿಯ ಡೋರ್ ಹ್ಯಾಂಡಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಗಾಗ ಸ್ಯಾನಿಟೈಜೇಷನ್ ಮಾಡಬೇಕು.
  10. ಕೆಲಸ ವೇಳೆ ಸಾಮಾಜಿಕ ಅಂತರ: ಕಚೇರಿಯಲ್ಲಿ ಕೆಲಸ ಮಾಡುವಾಗ ಸಿಬ್ಬಂದಿಯ ಮಧ್ಯೆ ಅಂತರ ಇರಬೇಕು. ಜೊತೆಗೆ ಶಿಫ್ಟ್ ಗಳ ಮಧ್ಯೆ ಸ್ವಚ್ಛತೆ, ಸ್ಯಾನಿಟೈಜೇಷನ್ ಮಾಡಲು ಅನುಕೂಲವಾಗುವಂತೆ ಸಮಯದ ಅಂತರವಿರಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending