ದಿನದ ಸುದ್ದಿ

ಜೂನ್ 7 ರವರೆಗೆ ಮತ್ತೆ ಲಾಕ್ ಡೌನ್ ; ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ : ಸಿಎಂ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಜೂನ್ 7 ನೇ ತಾರೀಖಿನವರೆಗೆ ಲಾಕ್ಡೌನ್ ವಿಧಿಸಲಾಗಿದೆ ಎಂದು ಸಿಎಂ, ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ತಜ್ಞರ ಅಭಿಪ್ರಾಯ ಪರಿಗಣಿಸಿ, ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ | ಪ್ರಸಿದ್ಧ ಛಾಯಾಗ್ರಾಹಕ ನೇತ್ರರಾಜು ನಿಧನ

‘ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಿ ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version