ದಿನದ ಸುದ್ದಿ

ದಾವಣಗೆರೆ | ಲಾಕ್ ಡೌನ್ ಸಡಿಲಿಕೆ ನಂತರ ಕೊರೋನಾ ಪ್ರಕರಣಗಳು ಹೆಚ್ಚಾಗಿವೆ : ಮೇಯರ್ ಅಜಯ್ ಕುಮಾರ್

Published

on

ಸುದ್ದಿದಿನ, ದಾವಣಗೆರೆ : ಲಾಕ್‍ಡೌನ್ ಸಡಿಲಿಕೆ ನಂತರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ. ಹಾಗಾಗಿ ಎಲ್ಲರೂ ಬಹಳಷ್ಟು ಜಾಗರೂಕತೆ ವಹಿಸಬೇಕು ಎಂದು ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ಎಚ್ಚರಿಕೆ ನೀಡಿದರು.

ಕೊರೊನಾದಿಂದ ಗುಣಮುಖರಾದ 5 ಜನರನ್ನು ಗುರುವಾರ ಆಸ್ಪತ್ರೆಯಿಂದ ಬೀಳ್ಕೊಟ್ಟ ಸಂದರ್ಭದಲ್ಲಿ ಮಾತನಾಡಿದ ಅವರು, ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸುವ ಮೂಲಕ ಕೊರೊನಾ ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು.

ದಾವಣಗೆರೆಯಲ್ಲಿ ಈಗಾಗಲೇ ಸಕ್ರಿಯವಾದ 97 ಪ್ರಕರಣಗಳು ಆಗಿದೆ. ವೈದ್ಯರು ಹೇಳುವ ಪ್ರಕಾರ ಅವರಲ್ಲಿ 50 ಜನ 14 ದಿನ ಚಿಕಿತ್ಸೆ ಮುಗಿಸಿರುವವರು ಇದ್ದಾರೆ. ಇವರ ಎರಡನೇ ಸುತ್ತಿನ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಪ್ರೊಟೊಕಾಲ್ ಪ್ರಕಾರ ಅವರನ್ನು ಬಿಡುಗಡೆಗೊಳಿಸುವ ವಿಶ್ವಾಸ ಇದೆ. ಕೇಸ್ ದಿನೇ ದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಜನರು ಎಚ್ಚೆತ್ತುಕೊಳ್ಳಬೇಕು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version