ದಿನದ ಸುದ್ದಿ
ಮಂಗಳವಾರದಿಂದ ಲಾಕ್ ಡೌನ್ : ಏನಿರತ್ತೆ..? ಏನಿರಲ್ಲ..?
ಸುದ್ದಿದಿನ,ಬೆಂಗಳೂರು: ಸೋಮವಾರ ಸಂಪುಟ ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ 14 ದಿನದವರೆಗೆ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್‌ಡೌನ್ ಅನಿವಾರ್ಯ ಎಂದು ಹೇಳಿದರು. ಲಾಕ್‌ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‌ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದರು.
ಇದನ್ನೂ ಓದಿ | ನಟಿ ಮಾಲಾಶ್ರೀ ಪತಿ ಕೋಟಿ ರಾಮು ಕೊರೋನಾಗೆ ಬಲಿ
18ರಿಂದ 45 ವರ್ಷದೊಳಗಿನವರಿಗೆ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ಸಿಎಂ ಸಭೆಯಲ್ಲಿ ತಿಳಿಸಿದರು. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕೃಷಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243