ದಿನದ ಸುದ್ದಿ
ಲೋಕಸಭಾ ಚುನಾವಣೆ | ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮತದಾರರು ತಮ್ಮ ದೂರು ಸಮಸ್ಯೆಗಳು ಏನೇ ಇದ್ದರೂ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.
- ಹಾವೇರಿ ಜಿಲ್ಲೆಯ 77 ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೇ 24ರಿಂದ ಏಪ್ರಿಲ್ ೬ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿರ್ಬಿಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.
- ಬೇಸಿಗೆಯಲ್ಲಿ ಬಿಸಿಲಿನ ಶಾಖ ಹೆಚ್ಚಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಮನವಿ ಮಾಡಿದ್ದಾರೆ.
- ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಖಾಸಗಿ ಕಾರ್ಖಾನೆಗಳಿಗೆ ನೀರು ಬಿಡದಂತೆ ಜಿಲ್ಲಾಧಿಕಾರಿಗಳಿಗೆ ಇದೇ 22 ರಂದು ಮನವಿ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಕಲಬುರಗಿ ವಿಭಾಗದ ರಾಜ್ಯ ಕಾರ್ಯದರ್ಶಿ ಗೋಣಿ ಬಸಪ್ಪ ಹೇಳಿದರು.
- ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಐದು ಸ್ಥಾನಗಳ ಮುನ್ನಡೆಯೊಂದಿಗೆ ವಿಶ್ವದ 13ನೇ ಶ್ರೇಯಾಂಕ ಪಡೆದಿದ್ದಾರೆ. ಫ್ರೆಂಚ್ ಓಪನ್ ಮತ್ತು ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್‌ನಲ್ಲಿ ಅತ್ಯುತ್ತಮ ಪ್ರದರ್ಶನದಿಂದ ಉನ್ನತ ಸ್ಥಾನಕ್ಕೇರಲು ನೆರವಾಗಿದೆ. ಎರಡೂ ಪಂದ್ಯಾವಳಿಗಳಲ್ಲಿ ಸೆಮಿಫೈನಲ್ ತಲುಪಿರುವ ಅವರು, 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


