ದಿನದ ಸುದ್ದಿ

ಲೋಕಸಭಾ ಚುನಾವಣೆ | ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮತದಾರರು ತಮ್ಮ ದೂರು ಸಮಸ್ಯೆಗಳು ಏನೇ ಇದ್ದರೂ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.

  1. ಹಾವೇರಿ ಜಿಲ್ಲೆಯ 77 ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೇ 24ರಿಂದ ಏಪ್ರಿಲ್ ೬ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿರ್ಬಿಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.
  2. ಬೇಸಿಗೆಯಲ್ಲಿ ಬಿಸಿಲಿನ ಶಾಖ ಹೆಚ್ಚಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಮನವಿ ಮಾಡಿದ್ದಾರೆ.
  3. ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಖಾಸಗಿ ಕಾರ್ಖಾನೆಗಳಿಗೆ ನೀರು ಬಿಡದಂತೆ ಜಿಲ್ಲಾಧಿಕಾರಿಗಳಿಗೆ ಇದೇ 22 ರಂದು ಮನವಿ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಕಲಬುರಗಿ ವಿಭಾಗದ ರಾಜ್ಯ ಕಾರ್ಯದರ್ಶಿ ಗೋಣಿ ಬಸಪ್ಪ ಹೇಳಿದರು.
  4. ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಐದು ಸ್ಥಾನಗಳ ಮುನ್ನಡೆಯೊಂದಿಗೆ ವಿಶ್ವದ 13ನೇ ಶ್ರೇಯಾಂಕ ಪಡೆದಿದ್ದಾರೆ. ಫ್ರೆಂಚ್ ಓಪನ್ ಮತ್ತು ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್‌ನಲ್ಲಿ ಅತ್ಯುತ್ತಮ ಪ್ರದರ್ಶನದಿಂದ ಉನ್ನತ ಸ್ಥಾನಕ್ಕೇರಲು ನೆರವಾಗಿದೆ. ಎರಡೂ ಪಂದ್ಯಾವಳಿಗಳಲ್ಲಿ ಸೆಮಿಫೈನಲ್ ತಲುಪಿರುವ ಅವರು, 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version