ದಿನದ ಸುದ್ದಿ
ಲೋಕಸಭೆ ಚುನಾವಣೆ ; ಮಾದರಿ ನೀತಿ ಸಂಹಿತೆ ಇಂದು ಅಂತ್ಯ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಇಂದು ಅಂತ್ಯಗೊಳ್ಳಲಿದೆ. 18ನೇ ಲೋಕಸಭೆಗೆ ಏಪ್ರಿಲ್ 19 ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು.
ಸುಮಾರು 45 ದಿನಗಳ ಕಾಲ ದೇಶಾದ್ಯಂತ ಲೋಕಸಭಾ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿತ್ತು. ರಾಜ್ಯದಲ್ಲಿ ಏಪ್ರಿಲ್ 26, ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.
ದೇಶಾದ್ಯಂತ ಇದೇ 4 ರಂದು ಮತಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿತ್ತು. ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ದೇಶಾದ್ಯಂತ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 292 ಸ್ಥಾನಗಳಿಸಿ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 234 ಸ್ಥಾನಗಳಲ್ಲಿ ಜಯಗಳಿಸಿದೆ. ನಿನ್ನೆ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243