ದಿನದ ಸುದ್ದಿ

ಲೋಕಾಯುಕ್ತದಲ್ಲಿರುವ ಮೂಡಾ ಪ್ರಕರಣದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ತಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ತಮ್ಮ ನಿವಾಸದಲ್ಲಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಅಪರಾಧ ಅಥವಾ ಇನ್ನಿತರ ಪ್ರಕರಣಗಳಿಗೆ ಕಾನೂನು ಪ್ರಕ್ರಿಯೆ ಎಂಬುವುದು ಇರುತ್ತದೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೇವಲ 3 ದಿನಗಳು ಬಾಕಿ ಇದ್ದು, ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಿ ದಸರಾ ಮಹೋತ್ಸವದ ಸಕಲ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version