ದಿನದ ಸುದ್ದಿ
ದಾವಣಗೆರೆ | ಏಪ್ರಿಲ್ 22ರಿಂದ ಉಪಲೋಕಾಯುಕ್ತರ ಪ್ರವಾಸ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಸುದ್ದಿದಿನ,ದಾವಣಗೆರೆ:ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಪಲೋಕಾಯುಕ್ತರು ಹಾಗೂ ಅವರೊಂದಿಗೆ ಆಗಮಿಸುವ ಅಪರ ನಿಬಂಧಕರು, ಉಪನಿಬಂಧಕರ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು. ಉಪಲೋಕಾಯುಕ್ತರು ಏಪ್ರಿಲ್ 22 ರಂದು ರಾತ್ರಿ 8.30 ಕ್ಕೆ ದಾವಣಗೆರೆಗೆ ಆಗಮಿಸಿ ಸಕ್ರ್ಯೂಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡುವರು.
ಏ.23 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ. 9.45 ರಿಂದ 10.45 ರವರೆಗೆ ದಾವಣಗೆರೆ ನ್ಯಾಯಾಂಗ ಸಂಕೀರ್ಣದಲ್ಲಿನ ಬಾರ್ ಅಸೋಸಿಯೇಷನ್‍ನಲ್ಲಿ ವಕೀಲರೊಂದಿಗೆ ಸಂವಾದ ನಡೆಸುವರು. ಬೆ.11 ರಿಂದ 1.30 ರವರೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮತ್ತು ಮ.2.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಏ.24 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವರು. ಮತ್ತು ಇದೇ ಸ್ಥಳದಲ್ಲಿ ಮಧ್ಯಾಹ್ನ2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು, ದೂರು, ಪ್ರಕರಣಗಳನ್ನು ಸ್ವೀಕರಿಸುವರು.
ಸಂಜೆ 5.30 ರಿಂದ 6.30 ರವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲೋಕಾಯುಕ್ತ ಕಾಯಿದೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು.
ಏಪ್ರಿಲ್ 25 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸುವರು. ಸಂಜೆ 6 ರಿಂದ 7 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ವಾಸ್ತವ್ಯ ಹೂಡುವರು. ಏ.26 ರಂದುಬೆಳಗ್ಗೆ 7 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.
ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾದ ಪ್ರಕರಣ; ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಹಾಗೂ ಸೌಲಬ್ಯ, ಸೇವೆ ಒದಗಿಸುವಲ್ಲಿ ವಿಳಂಬ, ತಾರತಮ್ಯ, ನಿಯಮ ಪಾಲನೆ ಮಾಡದಿದ್ದಲ್ಲಿ ಏ.24 ರಂದು ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ವಿವಿಧ ಕೌಂಟರ್‍ಗಳನ್ನು ಇದಕ್ಕಾಗಿ ತೆರೆಯಲಾಗಿರುತ್ತದೆ. ಯಾವುದೇ ಭಯವಿಲ್ಲದೇ ತಮ್ಮ ದೂರುಗಳನ್ನು ಉಪಲೋಕಾಯುಕ್ತರಿಗೆ ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲಾಗಿರುತ್ತದೆ, ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು ಮತ್ತು ಮಧ್ಯಾಹ್ನ ಉಪಹಾರವನ್ನು ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲೆಯ ಅಭಿವೃದ್ದಿಯ ಹಿನ್ನಲೆ ಹಾಗೂ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತು ಹಲವು ಸುಧಾರಣೆಗಳನ್ನು ಜಾರಿ ಮಾಡಲು ಎಲ್ಲಾ ಅಧಿಕಾರಿಗಳು ಸೇರಿ ತಂಡವಾಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಂಚಾರಿ ನಿಯಮ ಜಾರಿ, ಹೆಲ್ಮೆಟ್ ಕಡ್ಡಾಯ, ಕಾನೂನು ಸುವ್ಯವ್ಯಸ್ಥೆ, ಕಂದಾಯ ಇಲಾಖೆಯಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವಾರು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಆಯಾಮಗಳಲ್ಲಿ ರಾಜ್ಯದ ರ್ಯಾಂಕಿಂಗ್‍ನಲ್ಲಿ 5 ರೊಳಗೆ ಇರುತ್ತದೆ ಎಂದರು.
ಜನರ ಇನ್ನಷ್ಟು ಕುಂದುಕೊರತೆಗಳ ನಿವಾರಣೆಗಾಗಿ ಜನರ ಬಳಿ ಆಡಳಿತ ಕೊಂಡೊಯ್ಯಲು ಜನತಾದರ್ಶನ ಕಾರ್ಯಕ್ರಮವನ್ನು ಏಪ್ರಿಲ್ ಅಂತ್ಯದಿಂದ ಆರಂಭಿಸಲಾಗುತ್ತದೆ ಎಂದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾತನಾಡಿ ಸರ್ಕಾರಿ ಇಲಾಖೆಗೆ ಸಂಬಂಧಿಸಿದ ಆಡಳಿತ ಪಕ್ಷಪಾತ, ತಾರತಮ್ಯ, ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ

ಸುದ್ದಿದಿನಡೆಸ್ಕ್:ಇಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು, ಕೆಲವು ಪ್ರಮುಖ ತೆರಿಗೆ ಹಾಗೂ ಹಣಕಾಸು ಬದಲಾವಣೆಗಳು ಮತ್ತು ಕೆಲವು ನೀತಿ ಸುಧಾರಣೆಗಳು ಜಾರಿಗೆ ಬರಲಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳು ಈ ಹಣಕಾಸು ವರ್ಷದಿಂದ ಅನ್ವಯವಾಗಲಿವೆ. ನಾಳೆಯಿಂದ, 12ಲಕ್ಷ ರೂಪಾಯಿ ಬಳ ಪಡೆಯುವ ವ್ಯಕ್ತಿಯು ಹೊಸ ತೆರಿಗೆ ವ್ಯವಸ್ಥೆ ಆರಿಸಿಕೊಂಡರೆ, ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
ಡಿಜಿಟಲ್ ಪಾವತಿಗಳು ಇಂದಿನಿಂದ ಹೊಸ ಬದಲಾವಣೆಯನ್ನು ಹೊಂದಿರುತ್ತವೆ. ದೀರ್ಘಕಾಲದ ನಿಷ್ಕ್ರಿಯ ಸ್ಥಿತಿಯಿಂದ ಇರುವ ಮೊಬೈಲ್ ಸಂಖ್ಯೆಗಳಿಗೆ ಯುಪಿಐ ಪಾವತಿ ಇರುವುದಿಲ್ಲ.
ಎಲ್ಲಾ ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಹೊಂದಿರುವುದು ಕಡ್ಡಾಯವಾಗಲಿದೆ. ಒಂದು ವೇಳೆ ವಿಫಲವಾದರೆ ಬ್ಯಾಂಕ್ ಭಾರಿ ದಂಡ ವಿಧಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.
ಜಲಸಾಹಸ ಕ್ರೀಡೆಯಲ್ಲಿ ಲೋಕಸಭಾ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ನಿರ್ಣಯ ಶಾಸ್ತ್ರ ವಿಭಾಗದ ವತಿಯಿಂದ ನಿರ್ಣಯ ಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೂಡಿಕೆ ತಜ್ಞರಾದ ಎಂಜಲ್ ವನ್ನ ಆದಿತ್ಯ ಮತ್ತು ಅಶೋಕ್ ರಾಯಭಾಗಿ ಅವರು ವಿದ್ಯಾರ್ಥಿಗಳಿಗೆ ಹೂಡಿಕೆ ವಿಷಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಮುಖ್ಯಸ್ಥರಾದ ವೆಂಕಟೇಶ್ ಬಾಬು ಎಸ್. ಅವರು ವಿದ್ಯಾರ್ಥಿಗಳಿಗೆ ಹೂಡಿಕೆಯ ಮಹತ್ವ ಮತ್ತು ಅದರ ಪ್ರಾಯೋಗಿಕ ಅಂಶಗಳ ಕುರಿತು ವಿವರಿಸಿದರು. ಅವರು ಹೂಡಿಕೆ ಹೇಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಹುದು ಮತ್ತು ಹೇಗೆ ಸ್ಮಾರ್ಟ್ ಹೂಡಿಕೆಗೆ ಮೊದಲ ಹೆಜ್ಜೆ ಇಡಬೇಕು ಎಂಬುದರ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು.
ಎಂಜಲ್ ವನ್ನ ಆದಿತ್ಯ ಅವರು ಹೂಡಿಕೆಯ ವಿವಿಧ ಪ್ರಕಾರಗಳು, ಅದರ ಲಾಭ-ನಷ್ಟಗಳು ಮತ್ತು ಸರಿಯಾದ ಹೂಡಿಕೆ ತಂತ್ರಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಅವರು ನೈಜ ಜಗತ್ತಿನ ಉದಾಹರಣೆಗಳನ್ನು ನೀಡಿ, ಹೂಡಿಕೆಯಲ್ಲಿ ತಿಳಿವಳಿಕೆಯಿಂದ ನಿರ್ಧಾರ ಕೈಗೊಳ್ಳುವ ತಂತ್ರಗಳನ್ನು ವಿವರಿಸಿದರು.
ಅಶೋಕ್ ರಾಯಭಾಗಿ ಅವರು ಹೂಡಿಕೆ ಕ್ಷೇತ್ರದಲ್ಲಿ ಜನರು ಸಾಮಾನ್ಯವಾಗಿ ಮಾಡುವ ತಪ್ಪುಗಳು ಮತ್ತು ಅವುಗಳನ್ನು ತಪ್ಪಿಸುವ ವಿಧಾನಗಳ ಬಗ್ಗೆ ಮಾತನಾಡಿದರು. ಇಂದಿನ ಹೂಡಿಕೆ ಪ್ರವೃತ್ತಿಗಳು ಮತ್ತು ಮಾರುಕಟ್ಟೆಯ ಬದಲಾವಣೆಗಳ ಬಗ್ಗೆ ವಿವರಿಸುವ ಮೂಲಕ ಅವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡಿದರು.
ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಭವಿಷ್ಯದ ಹಣಕಾಸು ನಿರ್ವಹಣೆಗೆ ಹಿತಕರ ಮಾಹಿತಿ ನೀಡಿದ್ದು, ಅವರು ಹೂಡಿಕೆ ಜಗತ್ತಿನಲ್ಲಿ ತಮ್ಮ ಮೊದಲ ಹೆಜ್ಜೆ ಇಡುವ ನೈಪುಣ್ಯವನ್ನು ಸಂಪಾದಿಸಲು ಪ್ರೇರೇಪಿಸಲಾಯಿತು. ಕಾರ್ಯಗಾರದಲ್ಲಿ ವಿಭಾಗದ ಎಲ್ಲಾ ಅಧ್ಯಾಪಕರೂ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ
-
ದಿನದ ಸುದ್ದಿ3 days ago
2 ಸಾವಿರ ಹೊಸ ಬಸ್ ಖರೀದಿಗೆ ಅನುದಾನ ಬಿಡುಗಡೆ
-
ದಿನದ ಸುದ್ದಿ4 days ago
ಜನಪದ ಕಲೆ ಸಾಹಿತ್ಯದ ಬೇರು : ಪ್ರಾಂಶುಪಾಲ ಡಾ. ಧನಂಜಯ ಬಿ.ಜಿ
-
ದಿನದ ಸುದ್ದಿ4 days ago
ಏಪ್ರಿಲ್ 2 ರಂದು ದಾವಣಗೆರೆ ವಿವಿ 12ನೇ ಘಟಿಕೋತ್ಸವ
-
ದಿನದ ಸುದ್ದಿ4 days ago
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಜಗಳೂರು | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ
-
ಅಂಕಣ2 days ago
ಕವಿತೆ | ನಟಿಸುತ್ತೇನೆ ಈ ಚಿತ್ರಶಾಲೆಯಲ್ಲಿ