Connect with us

ರಾಜಕೀಯ

ಲೋಕಸಭೆ ಚುನಾವಣೆ : ಕಾಂಗ್ರೆಸ್​​ ಅಭ್ಯರ್ಥಿಗಳ ಮೊದಲ ಪಟ್ಟಿ..!

Published

on

ಸುದ್ದಿದಿನ, ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಅದರಲ್ಲಿ 11 ಉತ್ತರ ಪ್ರದೇಶ ಹಾಗೂ 4 ಗುಜರಾತ್​ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇದಾಗಿದೆ.

ಸೋನಿಯಾ ಗಾಂಧಿ ರಾಯ್ ಬರೇಲಿಯಲ್ಲಿ, ರಾಹುಲ್ ಗಾಂಧಿ ಅಮೇಥಿಯಲ್ಲಿ ಸ್ಪರ್ಧೆ ಮಾಡುತ್ತಿದ್ದು ಉಳಿದ ಅಭ್ಯರ್ಥಿಗಳ ಪಟ್ಟಿ ಹೀಗಿದೆ.

ಅಭ್ಯರ್ಥಿಗಳ ಪಟ್ಟಿ

  1. ಅಹಮದಾಬಾದ್​ ಪಶ್ಚಿಮ( ಗುಜರಾತ್​ ),ರಾಜು ಪರಿಮಾರ್​
  2. ಆನಂದ ( ಗುಜರಾತ್​), ಭರತ್​ ಸಿನ್ಹ
  3. ಸೋಲಂಕಿ ವಡೋದರಾ, (ಗುಜರಾತ್) ಪ್ರಶಾಂತ್​ ಪಟೇಲ್​
  4. ಚೋಟ ಉದಯ್​ಪುರ (​ಗುಜರಾತ್)​, ರಂಜೀತ್​ ಮೋಹನ್​ ಸಿನ್ಹಾ ರತ್ವಾ
  5. ಸಹರಾನ್​ಪುರ​( ಉತ್ತರ ಪ್ರದೇಶ), ಇಮ್ರಾನ್​ ಮಸೂದ್​
  6. ಬದೌನ್​ (ಉತ್ತರ ಪ್ರದೇಶ), ಸಲೀಮ್​ ಇಕ್ಬಾಲ್​ ಶೇರ್​ವಾನಿ
  7. ದೌರಾಹ್ರ​ (ಉತ್ತರ ಪ್ರದೇಶ), ಜಿತಿನ್​ ಪ್ರಸಾದ್​
  8. ಉನ್ನಾವೋ(ಉತ್ತರ ಪ್ರದೇಶ), ಅನ್ನು ಥಂಡನ್
  9. ರಾಯ್ ಬರೇಲಿ(ಉತ್ತರ ಪ್ರದೇಶ), ಸೋನಿಯಾಗಾಂಧಿ
  10. ಅಮೇಥಿ (ಉತ್ತರ ಪ್ರದೇಶ), ರಾಹುಲ್ ಗಾಂಧಿ
  11. ಫರೂಖಬಾದ್(ಉತ್ತರ ಪ್ರದೇಶ), ಸಲ್ಮಾನ್ ಖುರ್ಷಿದ್​
  12. ಅಕ್ಬರ್​​ಪುರ್(ಉತ್ತರ ಪ್ರದೇಶ), ರಾಜರಾಮ್​ಪಾಲ್
  13. ಜಲಾವುನ್-ಎಸ್ಸಿ(ಉತ್ತರ ಪ್ರದೇಶ), ಬ್ರಿಜ್ ಲಾಲ್ ಖಬ್ರಿ
  14. ಫಜಿಯಾಬಾದ್(ಉತ್ತರ ಪ್ರದೇಶ), ನಿರ್ಮಲ್ ಖಟಾರಿ
  15. ಖುಷಿನಗರ(ಉತ್ತರ ಪ್ರದೇಶ), ಆರ್​ಪಿಎನ್​​ ಸಿಂಗ್​​

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

Published

on

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.

35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ1 week ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ2 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ2 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ2 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ2 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

ದಿನದ ಸುದ್ದಿ2 weeks ago

ರಿಯಾಯಿತಿ ದರದಲ್ಲಿ ಲಿಡಕರ್ ವಸ್ತುಗಳ ಮಾರಾಟ

ಸುದ್ದಿದಿನ,ದಾವಣಗೆರೆ : ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡಕರ್) ನಿಗಮದ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 20 ರವರೆಗೆ ಅಪ್ಪಟ ಚರ್ಮದ...

ದಿನದ ಸುದ್ದಿ2 weeks ago

ಸೆಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಮಾರಾಟ ನಿಷೇಧ

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿ ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ...

ದಿನದ ಸುದ್ದಿ3 weeks ago

ಇಂದು ತೆಂಗು ವಿಶ್ವ ದಿನ

ಸುದ್ದಿದಿನ ಡೆಸ್ಕ್ : ಇಂದು ತೆಂಗಿನ ವಿಶ್ವ ದಿನ. ತೆಂಗು ಬೆಳೆಗಾರರ ಹಿತ ರಕ್ಷಣೆ ಹಾಗೂ ತೆಂಗಿನ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಚಿಂತಿಸಲು, ಈ ದಿನಾಚರಣೆ ಮೀಸಲು. ಹೊಸ...

Trending