Connect with us

ದಿನದ ಸುದ್ದಿ

ಹದಿನೆಂಟನೇ ಲೋಕಸಭಾ ಚುನಾವಣಾ ಫಲಿತಾಂಶದ ಕಿರುನೋಟ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ ಡೆಸ್ಕ್ : ಹದಿನೆಂಟನೇ ಲೋಕಸಭಾ ಚುನಾವಣಾ ಫಲಿತಾಂಶದ ಕಿರುನೋಟ ಈ ರೀತಿ ಇದೆ. ಬಿಜೆಪಿ ನಾಯಕರಾದ ನರೇಂದ್ರ ಮೋದಿ, ವಾರಾಣಸಿಯಿಂದ ಅಮಿತ್ ಶಾ, ಗಾಂಧಿನಗರದಿಂದ, ಬಿಕನೇರ್ ನಿಂದ ಅರ್ಜುನ್ ರಾಮ್ ಮೇಘ್ವಾಲ್, ಜೋದ್ಪುರದಿಂದ ಗಜೇಂದ್ರ ಸಿಂಗ್ ಶೇಖಾವತ್, ಗುನಾ ದಿಂದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಓಂಬಿರ್ಲಾ ಜಯಗಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್ ಬರೇಲಿ ಹಾಗೂ ವೈಯನಾಡು ಕ್ಷೇತ್ರಗಳಿಂದ ಸಮಾಜವಾದಿ ಪಕ್ಷದ ಡಿಂಪಲ್ ಯಾದವ್, ಮೈನ್‌ಪುರಿ ಕ್ಷೇತ್ರದಿಂದ ಹಾಗೂ ಟಿಎಂಸಿಯ ಶತ್ರುಘ್ನ ಸಿನ್ಹಾ, ಅನನ್‌ಸೋಲ್, ಮತಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತರಪ್ರದೇಶದ 80 ಕ್ಷೇತ್ರಗಳ ಪೈಕಿ ಸಮಾಜವಾದಿ ಪಕ್ಷ 37, ಬಿಜೆಪಿ 33, ಕಾಂಗ್ರೆಸ್ 6 ಮತ್ತು ರಾಷ್ಟ್ರೀಯ ಲೋಕದಳ 2 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದೆ. ಬಿಜೆಪಿ ಧುರೀಣ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿ ಕಾಂಗ್ರೆಸ್‌ನ ಅಜಯ್ ರೈ ಅವರನ್ನು ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. ಬಿಜೆಪಿಯ ರಾಜನಾಥ್ ಸಿಂಗ್, ಲಖನೌ ಕ್ಷೇತ್ರದಿಂದ ಒಂದು ಲಕ್ಷ 35 ಸಾವಿರ ಅಂತರದಿಂದ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್‌ಬರೇಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3 ಲಕ್ಷ 90 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕನೌಜ್ ದಿಂದ ವಿಜಯ ಸಾಧಿಸಿದ್ದಾರೆ. ಬಿಹಾರದ 40 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಯು ತಲಾ 12 ಸ್ಥಾನಗಳನ್ನು ಗಳಿಸಿದೆ.

ದೆಹಲಿಯಲ್ಲಿ ಎಲ್ಲ 7 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಪಂಜಾಬ್‌ನಲ್ಲಿ 13 ಸ್ಥಾನಗಳ ಪೈಕಿ ಕಾಂಗ್ರೆಸ್ 7, ಆಮ್ ಆದ್ಮಿ ಪಕ್ಷ 3, ಶಿರೊಮಣಿ ಅಕಾಲಿ ದಳ 1, ಪಕ್ಷೇತರರು 2 ಸ್ಥಾನ ಗಳಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 5 ಸ್ಥಾನಗಳಲ್ಲಿ ಜಯಗಳಿಸಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ತಲಾ 2 ಸ್ಥಾನ ಗಳಿಸಿದ್ದು, ಮತ್ತೊಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿ ವಿಜಯ ಸಾಧಿಸಿದ್ದಾರೆ. ಚಂಡೀಗಢದ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಲಡಾಖ್‌ನ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ‍್ಯ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಹಿಮಾಚಲ ಪ್ರದೇಶದ ಎಲ್ಲ 4, ಮಧ್ಯಪ್ರದೇಶದ ಎಲ್ಲ 29 ಹಾಗೂ ಉತ್ತರಖಂಡದ ಎಲ್ಲ 5, ತ್ರಿಪುರ್ ಎಲ್ಲ 2, ಅಂಡಮಾನ್-ನಿಕೋಬಾರ್ 1 ಸ್ಥಾನಗಳಲ್ಲಿ ಬಿಜೆಪಿ ಜಯ ದಾಖಲಿಸಿದೆ. ರಾಜ್ಯಸ್ಥಾನದ 25 ಸ್ಥಾನಗಳ ಪೈಕಿ ಬಿಜೆಪಿ 14, ಕಾಂಗ್ರೆಸ್ 8, ಸಿಪಿಎಂ ಹಾಗೂ ಆರ್‌ಎಲ್‌ಎಸ್ ಮತ್ತು ಭಾರತ್ ಆದಿವಾಸಿ ಪಕ್ಷ 1 ಸ್ಥಾನ ಪಡೆದಿವೆ. ಗುಜರಾತ್‌ನಲ್ಲಿ 25 ಸ್ಥಾನಗಳನ್ನು ಬಿಜೆಪಿ ಹಾಗೂ 1 ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 9 ಬಿಜೆಪಿ, 13 ಕಾಂಗ್ರೆಸ್, 9 ಶಿವಸೇನಾ ಉದ್ದವ್, 7 ಶಿವಸೇನಾ ಎಸ್‌ಎಚ್‌ಎಸ್, 8 ಎನ್‌ಸಿಪಿ ಪವಾರ್ ಹಾಗೂ 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ.

ಗೋವಾದಲ್ಲಿ 1 ಸ್ಥಾನವನ್ನು ಕಾಂಗ್ರೆಸ್ ಮತ್ತೊಂದು ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ. ಛತ್ತೀಸ್‌ಗಢದಲ್ಲಿ ಬಿಜೆಪಿ 10, ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಜಯಸಾಧಿಸಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ 8, ಎಜೆಎಸ್‌ಯು 1, ಜೆಎಂಎಂ 3 ಹಾಗೂ ಕಾಂಗ್ರೆಸ್ 2 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳನ್ನು ಗೆದ್ದಿದೆ. ಅಸ್ಸಾಂನಲ್ಲಿ ಬಿಜೆಪಿ 9, ಕಾಂಗ್ರೆಸ್ 3, ಯುಪಿಪಿಎಲ್ ಮತ್ತು ಅಸ್ಸಾಂಗಣ ಪರಿಷತ್ ತಲಾ 1 ಸ್ಥಾನಗಳಿಸಿದೆ.

ನಾಗಾಲ್ಯಾಂಡ್‌ನ 1 ಹಾಗೂ ಮಣಿಪುರದ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದುಕೊಂಡಿದೆ. ಆಂಧ್ರಪ್ರದೇಶದ 25 ಸ್ಥಾನಗಳಲ್ಲಿ ಟಿಡಿಪಿ 16, ಬಿಜೆಪಿ 3, ವೈಎಸ್‌ಆರ್‌ಸಿಪಿ 4, ಜನಸೇನಾ ಪಕ್ಷ 2 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ತೆಲಂಗಾಣದಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ 8 ಸ್ಥಾನ ಹಾಗೂ ಎಐಎಂಐಎಂ 1 ಕ್ಷೇತ್ರದಲ್ಲಿ ಜಯಗಳಿಸಿದೆ.

ತಮಿಳುನಾಡಿನಲ್ಲಿ ಡಿಎಂಕೆ 22, ಕಾಂಗ್ರೆಸ್ 9, ವಿಸಿಕೆ, ಸಿಪಿಐ ಮತ್ತು ಸಿಪಿಐಎಂ ತಲಾ 2 ಕ್ಷೇತ್ರಗಳಲ್ಲಿ ವಿಜಯ ದಾಖಲಿಸಿದೆ. ಕೇರಳದಲ್ಲಿ ಯುಡಿಎಫ್ 18, ಸಿಪಿಐಎಂ 1 ಸ್ಥಾನದಲ್ಲಿ ಜಯಗಳಿಸಿವೆ. ಬಿಜೆಪಿ ಇದೇ ಮೊದಲ ಬಾರಿಗೆ ತನ್ನ ಖಾತೆಯನ್ನು ಆರಂಭಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ರಲ್ಲಿ ಬಿಜೆಪಿ, 2 ರಲ್ಲಿ ಜೆಡಿಎಸ್, 9 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending