ದಿನದ ಸುದ್ದಿ

ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ ಹೆಚ್ಚಳ ; ಇತಿಹಾಸದಲ್ಲೇ ಮೊದಲ ಸಲ ಒಂದೇ ತಿಂಗಳಲ್ಲಿ ಮೂರನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆಯಾಗಿದ್ದು..!

Published

on

ಸುದ್ದಿದಿನ, ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಮತ್ತೆ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್ (14.2 ಕೆಜಿ) ಬೆಲೆಯನ್ನು ಗುರುವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂ.ಗೆ ಹೆಚ್ಚಿಸಿವೆ. ಫೆಬ್ರವರಿ ತಿಂಗಳಲ್ಲೇ ಮೂರನೇ ಸಲ ಬೆಲೆ ಏರಿಸಲಾಗಿದೆ . ಅಡುಗೆ ಅನಿಲ ಸಿಲಿಂಡರ್‌ಗೆ ಈಗ ದೆಹಲಿಯಲ್ಲಿ 794 ರೂ. ಆಗಿದ್ದು ಫೆಬ್ರವರಿಯಲ್ಲಿ ಒಟ್ಟು ಒಂದು ಸಿಲಿಂಡರ್‌ಗೆ 100 ರೂ. ಹೆಚ್ಚಾದಂತಾಗಿದೆ.

ಇದಕ್ಕೂ ಮುನ್ನ ಫೆಬ್ರವರಿ-04 -14 ನೇ ತಾರೀಖಿನಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಡುಗೆ ಅನಿಲದ ಬೆಲೆಯನ್ನು ತಿಂಗಳಲ್ಲಿ ಮೂರು ಬಾರಿ ಹೆಚ್ಚಿಸಲಾಗಿದೆ. ಡಿಸೆಂಬರ್‌ನಿಂದ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್‌ಗೆ 200 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಇದನ್ನೂ ಓದಿ | ಇಂದು ರಾತ್ರಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಎಚ್ಚರಿಕೆ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳು ನಿರ್ಧರಿಸುತ್ತವೆ. ಇದನ್ನು ನವೆಂಬರ್ 2020 ರವರೆಗೆ ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತಿತ್ತು. ಆದಾಗ್ಯೂ, ಡಿಸೆಂಬರ್‌ನಲ್ಲಿ ಒಎಂಸಿಯು ಎರಡು ಬಾರಿ ಬೆಲೆಯನ್ನು ಹೆಚ್ಚಿಸಿದೆ. ಎಲ್ಪಿಜಿ ಬೆಲೆ ಅಂತರರಾಷ್ಟ್ರೀಯ ಇಂಧನ ದರಗಳು ಮತ್ತು ಯುಎಸ್ ಡಾಲರ್-ರೂಪಾಯಿ ವಿನಿಮಯ ದರಗಳಂತಹ ಅಂಶಗಳನ್ನು ಅವಲಂಬಿಸಿರುತ್ತದೆ. ಈ ಅಂಶಗಳ ಆಧಾರದ ಮೇಲೆ ಬೆಲೆಗಳು ಹೆಚ್ಚಾಗುತ್ತಲೇ ಇರುತ್ತವೆ.

ಅದರಂತೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಕಂಡಿರುವ ಈ ಸಮಯದಲ್ಲಿ ಎಲ್‌ಪಿಜಿಯ ಬೆಲೆಯೂ ಏರಿಕೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version