ದಿನದ ಸುದ್ದಿ
ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ ಹೆಚ್ಚಳ ; ಇತಿಹಾಸದಲ್ಲೇ ಮೊದಲ ಸಲ ಒಂದೇ ತಿಂಗಳಲ್ಲಿ ಮೂರನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆಯಾಗಿದ್ದು..!
ಸುದ್ದಿದಿನ, ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಮತ್ತೆ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್ (14.2 ಕೆಜಿ) ಬೆಲೆಯನ್ನು ಗುರುವಾರದಿಂದ ಪ್ರತಿ ಸಿಲಿಂಡರ್‌ಗೆ 25 ರೂ.ಗೆ ಹೆಚ್ಚಿಸಿವೆ. ಫೆಬ್ರವರಿ ತಿಂಗಳಲ್ಲೇ ಮೂರನೇ ಸಲ ಬೆಲೆ ಏರಿಸಲಾಗಿದೆ . ಅಡುಗೆ ಅನಿಲ ಸಿಲಿಂಡರ್‌ಗೆ ಈಗ ದೆಹಲಿಯಲ್ಲಿ 794 ರೂ. ಆಗಿದ್ದು ಫೆಬ್ರವರಿಯಲ್ಲಿ ಒಟ್ಟು ಒಂದು ಸಿಲಿಂಡರ್‌ಗೆ 100 ರೂ. ಹೆಚ್ಚಾದಂತಾಗಿದೆ.
ಇದಕ್ಕೂ ಮುನ್ನ ಫೆಬ್ರವರಿ-04 -14 ನೇ ತಾರೀಖಿನಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಡುಗೆ ಅನಿಲದ ಬೆಲೆಯನ್ನು ತಿಂಗಳಲ್ಲಿ ಮೂರು ಬಾರಿ ಹೆಚ್ಚಿಸಲಾಗಿದೆ. ಡಿಸೆಂಬರ್‌ನಿಂದ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್‌ಗೆ 200 ರೂ.ಗಳಷ್ಟು ಹೆಚ್ಚಿಸಲಾಗಿದೆ.
ಇದನ್ನೂ ಓದಿ | ಇಂದು ರಾತ್ರಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಎಚ್ಚರಿಕೆ
ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳು ನಿರ್ಧರಿಸುತ್ತವೆ. ಇದನ್ನು ನವೆಂಬರ್ 2020 ರವರೆಗೆ ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತಿತ್ತು. ಆದಾಗ್ಯೂ, ಡಿಸೆಂಬರ್‌ನಲ್ಲಿ ಒಎಂಸಿಯು ಎರಡು ಬಾರಿ ಬೆಲೆಯನ್ನು ಹೆಚ್ಚಿಸಿದೆ. ಎಲ್ಪಿಜಿ ಬೆಲೆ ಅಂತರರಾಷ್ಟ್ರೀಯ ಇಂಧನ ದರಗಳು ಮತ್ತು ಯುಎಸ್ ಡಾಲರ್-ರೂಪಾಯಿ ವಿನಿಮಯ ದರಗಳಂತಹ ಅಂಶಗಳನ್ನು ಅವಲಂಬಿಸಿರುತ್ತದೆ. ಈ ಅಂಶಗಳ ಆಧಾರದ ಮೇಲೆ ಬೆಲೆಗಳು ಹೆಚ್ಚಾಗುತ್ತಲೇ ಇರುತ್ತವೆ.
ಅದರಂತೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಕಂಡಿರುವ ಈ ಸಮಯದಲ್ಲಿ ಎಲ್‌ಪಿಜಿಯ ಬೆಲೆಯೂ ಏರಿಕೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


