ದಿನದ ಸುದ್ದಿ
ಮಾಜಿ ಶಾಸಕ ಎಂ.ಪಿ.ರವೀಂದ್ರ ವಿಧಿವಶ : ನಾಳೆ ಅಂತ್ಯಕ್ರಿಯೆ
ಸುದ್ದಿದಿನ ಡೆಸ್ಕ್ : ಹರಪನಹಳ್ಳಿಯ ಮಾಜಿ ಶಾಸಕರು ಹಾಗೂ ಕೆ.ಎಂ.ಎಫ್ ನಿರ್ದೇಶಕರು ಮತ್ತು ಬಿ.ಡಿ.ಸಿ.ಸಿ ಬ್ಯಾಂಕ್ನ ಅಧ್ಯಕ್ಷರಾಗಿದ್ದ ಎಂ.ಪಿ.ರವೀಂದ್ರ ಅವರು ಇಂದು ಬೆಳಿಗ್ಗೆ 4.ಕ್ಕೆ ವಿದಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ 12 ಗಂಟೆಗೆ ಹೂವಿನಹಡಗಲಿಯಲ್ಲಿ ನೆಡೆಯಲಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಸಿಂಗಾಪುರ್ ನಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು.
ಮೊನ್ನೆಯಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401