ದಿನದ ಸುದ್ದಿ

ಮರಳು ಅಡ್ಡೆಗಳ ಮೇಲೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಢೀರ್ ದಾಳಿ

Published

on

ಸುದ್ದಿದಿನ,ಮಂಡ್ಯ: ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜ್ ರವರ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಯಿತು.

ಕೂಳಗೆರೆ ,ಬನ್ನಹಳ್ಳಿ ,ಕೊಕ್ಕರೆ ಬೆಳ್ಳೂರು , ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆಯನ್ನು ನಡೆಸುತ್ತಿದ್ದಾರೆ ಎಂದು ಬಂದ ದೂರಿನ ಆಧಾರದ ಮೇಲೆ ಮತ್ತುಶನಿವಾರ ಶಿವಪುರದ ಸೋಮಣ್ಣ ಎಂಬುವವರು ಶಿಂಷಾನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನೀರಿನ ಟ್ಯಾಂಕ್ ಮೇಲೆ ಹತ್ತಿದ ಪರಿಣಾಮ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್ ಶ್ವೇತಾ , ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್,ಸಬ್ ಇನ್ಸ್ಪೆಕ್ಟರ್ ಮಂಜೇಗೌಡ, ಹಾಗೂ ಪೊಲೀಸ್ ಇಲಾಖೆ , ಲೋಕೋಪಯೋಗಿ ಇಲಾಖೆ , ಕಂದಾಯ ಇಲಾಖೆ,ಸಿಬ್ಬಂದಿಗಳು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9985715401

Trending

Exit mobile version