ದಿನದ ಸುದ್ದಿ
ಮದ್ದೂರು| ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತನ ಹತ್ಯೆ : ಡಿ.ಎಸ್.ಎಸ್ ನಿಂದ ಪ್ರತಿಭಟನೆ
ಸುದ್ದಿದಿನ,ಮಂಡ್ಯ: ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಹಂಗರಹಳ್ಳಿ ಕಲ್ಲುಕೋರೆಯಲ್ಲಿ ಜೀತದಾಳು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕು ಹಗರಿಬೊಮ್ಮನಹಳ್ಳಿ ಗ್ರಾಮದ ಕರಿಯಪ್ಪ ಮಾದರ ಅವರನ್ನು ಹತ್ಯೆ ಮಾಡಿರುವ ಕೃತ್ಯವನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಯಿತು
ಪಟ್ಟಣದ ಪ್ರವಾಸಿ ಮಂದಿರದ ಬಳಿ ಕಾರ್ಯಕರ್ತರು ಜಮಾವಣೆಗೊಂಡು ಅಲ್ಲಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಧಿಕ್ಕಾರವನ್ನು ಕೂಗುತ್ತಾ ತಾಲ್ಲೂಕು ಕಚೇರಿಗೆ ಆಗಮಿಸಿ ಮುತ್ತಿಗೆ ಹಾಕಿದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಸೋಮನಹಳ್ಳಿ ಅಂದಾನಿ ಅವರು ಮಾತನಾಡಿ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀ ಉಮೇಶ್ ಅವರ ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕರಿಯಪ್ಪ ಮಾದರ ಕೊಲೆಯನ್ನು ಸಿಓಡಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಕಲ್ಲುಗಣಿಗಳಲ್ಲಿ ಜೀತದಾಳುಗಳಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಬಿಡುಗಡೆಗೊಳಿಸ ಬೇಕು ಮಂಡ್ಯ ಜಿಲ್ಲೆಯಲ್ಲಿ ಜೀತ ಪ್ರಕರಣಗಳ ಬಗ್ಗೆ ಹಲವು ಬಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವುದು ರಿಂದ ಜಿಲ್ಲಾಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಅಕ್ರಮ ಕಲ್ಲು ಕ್ವಾರೆಗಳಲ್ಲಿ ಇಟ್ಟಿಗೆ ಗೂಡುಗಳಲ್ಲಿ ಕೋಳಿ ಫಾರಂಗಳಲ್ಲಿ ಜೀತದಾಳುಗಳನ್ನಾಗಿ ವರ್ಷಾನುಗಟ್ಟಲೆ ದುಡಿಸಿಕೊಳ್ಳುತ್ತಿದ್ದಾರೆ ಕೆಲವು ಭ್ರಷ್ಟ ಅಧಿಕಾರಿಗಳ ಬೆಂಬಲದಿಂದ ಜೀತ ಪದ್ಧತಿ ಜೀವಂತವಾಗಿದೆ ಅಸ್ಪೃಶ್ಯತೆ ಜೀತ ಪದ್ಧತಿ ನಿಷೇಧವಿದ್ದರೂ ಸಂಪೂರ್ಣವಾಗಿ ತಡೆಯಲಾಗದ ರಾಜ್ಯ ಸರ್ಕಾರ ಮತ್ತು ಮಂಡ್ಯ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಹಂಗರಹಳ್ಳಿ ಕಲ್ಲುಕೋರೆಯಲ್ಲಿ ಕರಿಯಪ್ಪ ಮಾದರ ಜೀವ ತೆಗೆದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಡಳಿತ ದಕ್ಷ ಅಧಿಕಾರಿಗಳ ತಂಡ ರಚಿಸಿ ಕಲ್ಲು ಕೋರೆಗಳು ಆಲೆಮನೆ ಕೋಳಿ ಫಾರಂ ಇಟ್ಟಿಗೆ ಗೂಡುಗಳಲ್ಲಿ ಜೀತದಾಳು ಗಳನ್ನು ಪತ್ತೆ ಹಚ್ಚಿ ಬಿಡುಗಡೆಗೊಳಿಸಬೇಕು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜಣ್ಣ ಶಿವು ಬಿಎಂ ಸತ್ಯ ನಾರಾಯಣ ರಂಗಸ್ವಾಮಿ ರಾಜೇಶ್ ಮನು ರಘು ಅಂಬರೀಶ್ ಮಾದೇಶ್ ಖಾನ್ ಶಂಕರ್ ರವಿ ಮುತ್ತಯ್ಯ ಹಾಗೂ ಇತರೆ ದಲಿತ ಪರ ಸಂಘಟನೆಗಳು ಜೀವಿಕ ಸಂಸ್ಥೆ ದಲಿತಪರ ಸಂಘಟನೆಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.
18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಒರಿಸ್ಸಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರ ತಂಡ ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು.
ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ನಮ್ಮ ಸರ್ಕಾರ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿದೆ.
ಕನ್ನಡಿಗರ ಹಿತ ಕಾಯಲು ಕಾಂಗ್ರೆಸ್ ಸದಾ ಬದ್ದ.… pic.twitter.com/b5PK9akslN
— Karnataka Congress (@INCKarnataka) June 4, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.
ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ3 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ