Connect with us

ದಿನದ ಸುದ್ದಿ

ದಾವಣಗೆರೆ | ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ; ಮಡಿವಾಳ ಮಾಚಿದೇವ ಸಂಘ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ರಾಜ್ಯದಲ್ಲಿ ನಡೆದ ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲಿನ ವಾಮಾಚಾರದ ಬಲಿ, ಹುಬ್ಬಳ್ಳಿ ನಗರದ ನೇಹಾ ಹಿರೇಮರ್ ಮತ್ತು ಅಂಜಲಿ ಅಂಬಿಗರ ಇವರನ್ನು ಹತ್ತೆಗೈದ ಆರೋಪಿಗಳನ್ನು ಹಾಗೂ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಹಲ್ಲೇಕೋರರನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘವು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಮಡಿವಾಳ ಸಮುದಾಯದ ಪದಾಧಿಕಾರಿಗಳು ರಾಜ್ಯದ ಮುಖ್ಯ ಮಂತ್ರಿಗಳಿಗೆ ರವಾನಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲೆ ವಾಮಾಚಾರ ಮಾಡಿ, ಆಕೆಯನ್ನು ಕತ್ತು ಕೊಯ್ದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ ಹೆಚ್ಚಾಗುತ್ತಿವೆ. ಪ್ರೀತಿಯ ಹೆಸರಿನಲ್ಲಿ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರನ್ನು ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಹಲವಾರು ಬಾರಿ ಚಾಕುವಿನಿಂದ ಇರಿದುಕೊಲೆ ಮಾಡಿದ್ದು, ಇಡೀ ರಾಜ್ಯವೇ ಭಯಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಲ್ಲದೇ ಹುಬ್ಬಳ್ಳಿಯಲ್ಲೇ ವಿಶ್ವ ಎಂಬಾತ ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಕೊಲೆ ಮಾಡಿ, ಪರಾರಿಯಾಗುವ ವೇಳೆ ದಾವಣಗೆರೆ ಸಮೀಪದ ಮಾಯಕೊಂಡ ರೈಲ್ವೆ ನಿಲ್ಧಾಣದಲ್ಲಿ ಮಹಿಳೆಯೊಬ್ಬಳ ಮೇಲೆ ಹತ್ಯೆಗೆ ಯತ್ನಿಸಿ, ಪ್ರಯಾಣಿಕರ ಸಹಕಾರದಿಂದ ರೈಲ್ವೆ ಪೊಲೀಸರಿಗೆ ಸಿಕ್ಕು ಬಿದ್ದಿದ್ದು, ಇದೀಗ ಪ್ರಕರಣ ತನಿಖೆ ನಡೆಯುತ್ತಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ ನಡೆದಿತ್ತು. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಇದೇ ರೀತಿ ರಾಜ್ಯದಲ್ಲಿ ಹಲವಾರು ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಪದೇಪದೇ ನಡೆಯುತ್ತಿದ್ದರೂ ಸಹ ರಾಜ್ಯದ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದರು.

ಕಲಬುರುಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಅರ್ಜುನ್ ಹಣುಮಂತಪ್ಪ, ಮಹಮ್ಮದ್ ಸಮೀರುದ್ದೀನ್, ಅಬ್ದುಲ್ ರೆಹಮಾನ್ ಎಂಬಾತರನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಲ್ಲದೇ ಅವರನ್ನು ವಿವಸ್ತçಗೊಳಿಸಿ, ಗುಪ್ತಾಂಗಕ್ಕೆ ಬಾಟರಿಯಿಂದ ಕರೆಂಟ್ ಶಾಕ್ ನೀಡಿದ ಪ್ರಕರಣ ದಾಖಲಾಗಿದೆ. ಈ ಘಟನೆಯ ವಿಡಿಯೋ ತುಣುಕುಗಳು ರಾಜ್ಯದೆಲ್ಲೆಡೆ ಹರಿದಾಡುತ್ತಿದ್ದು, ಅಮಾನವಿಯವಾದ ರೀತಿಯಲ್ಲಿ ನಡೆದುಕೊಂಡ ಆರೋಪಿಗಳನ್ನು ಕಲಬುರುಗಿಯ ವಿಶ್ವವಿದ್ಯಾನಿಲಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇದೇ ರೀತಿ ರಾಜ್ಯದಲ್ಲಿ ಹಲ್ಲೇ, ದೌರ್ಜನ್ಯ, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯದ ಜನರನ್ನು ಭಯಬೀತರನ್ನಾಗಿ ಮಾಡಿದೆ. ಅದರಲ್ಲೂ, ಯುವತಿಯರು ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಹೆದರುವ ವಾತಾವರಣ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಗೃಹ ಇಲಾಖೆ ಸೂಕ್ತ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಇದಲ್ಲದೇ ಈ ಎಲ್ಲಾ ಪ್ರಕರಣಗಳಲ್ಲಿ ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಜಿ.ಕಿಶೋರ್ ಕುಮಾರ್, ಆರ್.ಎನ್.ಮಾರುತಿ, ಅಂಜಿನಪ್ಪ ಪೂಜಾರ್, ಜಿ.ವಿಜಯ ಕುಮಾರ್, ಹನುಮಂತಪ್ಪ, ಕಕ್ಕರಗೊಳ್ಳ ಮಂಜುನಾಥ್, ಅಣಜಿ ಹನುಮಂತಪ್ಪ, ಐಗೂರು ಅಂಜಿನಪ್ಪ, ಅರಸೀಕೆರೆ ಬಸವರಾಜ್, ರವಿ ಚಿಕ್ಕಣ್ಣ, ಮಧುರಾ, ನಾಗಮ್ಮ, ಡೈಮಂಡ್ ಮಂಜುನಾಥ್, ಗೋಪಾಲ್, ಕೃಷ್ಣಮೂರ್ತಿ, ರವಿ, ಬಾತಿ ಶಂಕರ್, ಸುಭಾಷ್, ರಾಜಣ್ಣ, ಎಂ.ಕೆ.ಬಸವರಾಜ್ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಣ್ಣ ಸಿಐಡಿ ಕಸ್ಟಡಿಗೆ ; ತಮ್ಮ ಸೆಂಟ್ರಲ್‌ ಜೈಲಿಗೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಅರ್ಜಿ ವಿಚಾರಣೆ ನಡೆಸಿದರು. ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ

Published

on

ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.

ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್‌ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Published

on

ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending