ದಿನದ ಸುದ್ದಿ
ಮದ್ರಾಸ್ ಐ ವೈರಾಣುವಿಗೆ ಭಯ ಪಡಬೇಕಾಗಿಲ್ಲ : ಡಾ. ನಾಗರಾಜ

ಸುದ್ದಿದಿನ,ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.
ಮದ್ರಾಸ್ ಐ ಈ ಬಾರಿ ಮಳೆಗಾಲದಲ್ಲಿ ಆರಂಭವಾಗಿದ್ದು ರಾಜ್ಯದ ಜನರಕಣ್ಣು ಕೆಂಪಾಗಿಸುತ್ತಿದೆ, ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳಲ್ಲಿ “ಮದ್ರಾಸ್ ಐ” ವೇಗಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಕಂಜಕ್ವಿಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿಕಣ್ಣಿ ಮೇಲೆ ಪರಿಣಾಮಉಂಟು ಮಾಡುತ್ತವೆ, ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಿಸಿಲು ಇಲ್ಲದಂತಾಗಿದೆ ಇದರ ಪರಿಣಾಮತೇವಾಂಶ ಹೆಚ್ಚಾಗಿ ಅವಧಿಗೂ ಮೊದಲೇ ಈ ವೈರಾಣು ದಾಂಗುಡಿ ಇರಿಸಿದೆ.
ರೋಗದ ಲಕ್ಷಣಗಳು
ಕಸ ಬಿದ್ದದಂತೆಆಗುವ ರೀತಿಯಾಗಿಕಣ್ಣುಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ, ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.
ಮುಂಜಾಗೃತಾ ಕ್ರಮಗಳು
ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ, ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ, ಕಣ್ಣಿಗೆಔಷಧ ಹಾಕಿಸಿಕೊಳ್ಳಬೇಡಿ, ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ, ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು, ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್‍ಗಳನ್ನು ಬಳಸಬಾರದು, ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.
ಪರಿಹಾರ
ಸಮಸ್ಯೆ ಉಳ್ಳವರು ಇತರರಿಂದದೂರಇರಬೇಕು, ವೈದ್ಯರ ಬಳಿ ತೋರಿಸಿ, ಐ ಡ್ರಾಪ್ಸ್ ಮಾತ್ರ ಹಾಕಬೇಕು, ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ,ಮೊಬೈಲ್, ಕಂಪ್ಯೂಟರ್‍ಗಳನ್ನು ನೋಡುವುದನ್ನ ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿಕೊಡಬೇಕು.
ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಆಸ್ಪತ್ರೆಗೆ ಭೇಟಿ, ವೈದ್ಯರ ಹತ್ತಿರತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ11 hours ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ1 day ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ12 hours ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ
-
ದಿನದ ಸುದ್ದಿ41 mins ago
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ