ದಿನದ ಸುದ್ದಿ

ಮಹದಾಯಿ ಹೋರಾಟ | ದಯಾಮರಣ ಕೊಡಲು ಆಗ್ರಹ

Published

on

ಸುದ್ದಿದಿನ ಡೆಸ್ಕ್ | ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಉತ್ತರಕ್ಕೊಂದು ದಕ್ಷಿಣಕ್ಕೊಂದು ಧೋರಣೆ ತೋರಿಸುತ್ತಿದ್ದಾರೆ. ರೈತರ ಸಾಲ ಮನ್ನಾ ವಿಳಂಬವಾಗುತ್ತಿದೆ. ಆದರೆ, ಮಂಡ್ಯದ ರೈತನಿಗೆ ಸಾಲ ಮನ್ನಾ ಮಾಡಿದ್ದಾರೆ ಇದು ಸರಿಯಲ್ಲ‌ ಎಂದು ಉತ್ತರ ಕರ್ನಾಟಕ ಜನರು ದೂರಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಇಲ್ಲದೇ ಬಿತ್ತನೆ ಮಾಡಿದ ಬೆಳೆ ಒಣಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಆದರೆ, ಪ್ರಚಾರಕ್ಕಾಗಿ ಗದ್ದೆಗೆ ಇಳಿದು ನಾಟಿ ಮಾಡಲು ಹೋಗುತ್ತಿದ್ದಾರೆ. ಪ್ರಾದೇಶಿಕ ಭಾಗಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಬರದ ನಾಡಿನ ರೈತರ ಸಮಸ್ಯೆ ಆಲಿಸುವಂತೆ ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಬರ ಪೀಡಿತವಾಗಿವೆ. ಸಾಲ ಮಾಡಿದ ಅನ್ನದಾತರು ಪರಿತಪಿಸುತ್ತಿದ್ದಾರೆ. ಮಂಡ್ಯದ ಗದ್ದೆಯಲ್ಲಿ ಇಳಿದು ನಾಟಿ ಮಾಡಿದರೆ ಸಾಲದು. ಇಲ್ಲಿಗೆ ಬಂದು ರೈತರ ಸಮಸ್ಯೆ ಆಲಿಸಿ ಎಂದು ಆಗ್ರಹಿಸಿದ್ದಾರೆ.

ಮಹಾದಾಯಿ ನೀರಿಗಾಗಿ ಹೋರಾಟ

ಮಹಾದಾಯಿ ನೀರಿನ ವಿಚಾರ ಸಂಬಂಧ ಉತ್ತರ ಕರ್ನಾಟಕದ ಹೋರಾಟಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪತ್ರ ಚಳವಳಿ ಆರಂಭಿಸಿದ್ದಾರೆ. ಮಹಾದಾಯಿ ನೀರು ಇಲ್ಲದಿದ್ದರೆ ದಯಾಮರಣ ಕೊಡುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಸಾಥ್ ನೀಡಿದ್ದಾರೆ. ಹೋರಾಟಗಾರ ವೀರೇಶ್ ಸೊಬರದಮಠ ನೇತೃತ್ವದಲ್ಲಿ ಚಳವಳಿ ಆರಂಭಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version