Connect with us

ರಾಜಕೀಯ

ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ

Published

on

mallikarjun kharge_suddidina
ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಶಿವಸೇನೆ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೋತ್ತಿದೆ. ನಾವು ಜನರಿಂದ ಅಧಿಕಾರಿ ಕಳೆದುಕೊಂಡಿಲ್ಲ ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಒಂದೇ ಅಲ್ಲ. ಬಹುತೇಕ ಕಡೆ ಕುತಂತ್ರದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದು ಡೆಮೋಕ್ರಾಸಿಗೆ ಬಹುದೊಡ್ಡ ಹೊಡೆತವಾಗಲಿದೆ‌. ಮೋದಿಜಿಯವರಿಗೆ 330 ರ ಮೇಲೂ ಸೀಟು ಬಂದ್ರು. ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರು ತೃಪ್ತಿಯಿಲ್ಲ, ಇಂತಹ ಕೆಲಸ ಮಾಡಬಾರದು ಇಂದಿಲ್ಲ ನಾಳೆ ದೇಶಕ್ಕೆ ಇದು ದೊಡ್ಡ ಹೊಡೆತ ಬಿಳುತ್ತೆ ಎಂದು ಕಳವಳ ವ್ಯಕ್ತಪಡಿಸಿದರು.

ಪಕ್ಷಾಂತರ ನಿಷೇದ ಕಾಯ್ದೆ ವಿಚಾರ

ಪಕ್ಷಾಂತರ ಕಾಯ್ದೆ ನಿಷೇಧ ಕಾಯ್ದೆ ಕಠೀಣ ಮಾಧರಿಯಲ್ಲಿ ಹೊರತರಬೇಕಿದೆ. ಇದು‌ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಮಾಡಬೇಕಾದ ಕೆಲಸವಾಗಿದೆ. ಯಾರೇ ಪಕ್ಷದ ರೂಲ್ಸ್‌ಗಳನ್ನ ಉಲ್ಲಂಘಿಸಿದ್ರೆ ಐದು ವರ್ಷ ಸ್ಪರ್ಧಿಸದಂತೆ ಕಾಯ್ದೆ ಜಾರಿಯಾಗಬೇಕು.ಸಂದರ್ಭ ಬಂದಾಗ ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಅಂತ ಹೇಳಿದ ಖರ್ಗೆ, ಮಹಾರಾಷ್ಟ್ರ ಸರ್ಕಾರ ಬಿಳುವ ಬಗ್ಗೆ ನಮಗೆನು ಇಂಟಲಿಜೆನ್ಸ್ ಮಾಹಿತಿ‌ ಇದ್ದಿರಲಿಲ್ಲ, ಆದರೆ ಈ ಚಟುವಟಿಕೆಗಳು ಮೊದಲಿನಿಂದಲೂ ನಡೆಯುತ್ತಾ ಬಂದಿದೆ. ಬಿಜೆಪಿ ಸರ್ಕಾರದ ಹ್ಯಾಬಿಟ್ ಒಂದೇ. ಏನಾದರು ಮಾಡಿ ನಡೆಯೋ ಸರ್ಕಾರ ಉರುಳಿಸುವುದು ಎಂದರು.

ಮಹಾರಾಷ್ಟ್ರದಲ್ಲಿ ಕ್ಲಚ್ ಒಬ್ರ ಕಡೆ. ಬ್ರೇಕ್ ಒಬ್ರ ಕಡೆ. ಎಕ್ಸ್‌ಲೇಟರ್ ಇಬ್ರ ಕಡೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖರ್ಗೆ, ಇದು ಅವರ ಕಲ್ಪನೆ ಇರಬಹುದು.‌‌ ಅವರ ಹತ್ರ ಹೋಗಿ ಕುಡೋಕೆ ಏನ್ ಬ್ರೇಕ್ ಸರಿಯಾಗಿದೆಯಾ? ಎಂದು ಬಿಜೆಪಿ ವಿರುದ್ಧ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜಸ್ಥಾನ ಕನ್ಹಯ್ಯಲಾಲ್ ಹತ್ಯೆ ಪ್ರಕರಣ

ರಾಜಸ್ಥಾನದ ಕನ್ಹಯ್ಯಲಾಲ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರು ತಪ್ಪು ಮಾಡಲಿ. ಯಾವ ಪಂಗಡದವನೆ ಆಗಿರಲಿ. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೆಬೇಕು.ಘಟನೆ ನಂತರ ಅಲ್ಲಿಯ ಸಿಎಂ ಆರೋಪಿಗಳನ್ನ ತಕ್ಷಣ ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸಿಎಂ ಕೊಲೆಯಾದ ವ್ಯಕ್ತಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಹೀಗಾಗಿ ಸಿಎಂರನ್ನ ವಜಾ ಮಾಡುವ ಅವಶ್ಯಕತೆ ಇಲ್ಲ. ಹತ್ಯೆಗೆ ಸಂಬಂಧಿಸಿದ ಈಗಾಗಲೇ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಇನ್ನು ಆರೋಪಿಗಳು ಪಾಕಿಸ್ಥಾನದ ಜೊತೆ ನಂಟಿದೆ ಎಂಬ ಬಿಜೆಪಿ ಆರೋಪಕ್ಕೆ ಇಂತಹ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಎಲ್ಲಾ ವಿಚಾರದಲ್ಲಿ ರಾಜಕೀಯ ಮಾಡಿನೇ ದೇಶವನ್ನ ಹಾಳು ಮಾಡುತ್ತಿದ್ದಾರೆ.ಇಂತಹ ಘಟನೆಗಳ ಕುರಿತು ಮಾತಾಡಿ ಅಂದರೆ ಮೋದಿ ಬಾಯಿನೇ ತೆರಯಂಗಿಲ್ಲ.ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಪ್ರಧಾನಿ ಮೋದಿ ಮಾತಾಡುತ್ತಾರೆ ಎಂದು ಕಿಡಿ ಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ

Published

on

ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.

ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.

ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.

ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending