Connect with us

ದಿನದ ಸುದ್ದಿ

ಮಹಿಳಾ ವಿವಿ | ಪ್ರಭಾರ ಕುಲಪತಿಯಾಗಿ ಪ್ರೊ.ಓಂಕಾರ ಕಾಕಡೆ ನೇಮಕ

Published

on

ಸುದ್ದಿದಿನ,ವಿಜಯಪುರ: ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜೂನ್ 19ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ವಜುಬಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಈ ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 20-6-2020ರಿಂದ 13-12-2020ರ ವರೆಗೆ ಅಥವಾ ನೂತನ ಕುಲಪತಿಗಳ ನೇಮಕ ಇದರಲ್ಲಿ ಯಾವುದು ಮೊದಲೋ ಅಲ್ಲಿಯ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ

ರಾಜ್ಯಪಾಲರ ಆದೇಶದಂತೆ ಪ್ರೊ.ಸಬಿಹಾ ಭೂಮಿಗೌಡ ಅವರು ನೂತನ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರಿಗೆ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಸಬಿಹಾ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರೊ.ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending