ದಿನದ ಸುದ್ದಿ
ಪ್ರಮುಖ ಸುದ್ದಿ ಮುಖ್ಯಾಂಶಗಳು
ಪ್ರಮುಖ ಸುದ್ದಿ ಮುಖ್ಯಾಂಶಗಳು
- ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ19ರಂದು ಸ್ವಿಟ್ಜರ್ಲ್ಯಾಂಡ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಕೆಲವು ಸಚಿವರು, ಅಧಿಕಾರಿಗಳು ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
- ಇಂಜಿನಿಯರಿಂಗ್ ಸೇನಾ ನಾನಾ ವೃತ್ತಿಪರ ಕೋರ್ಸ್ಗಳ ಪ್ರವೇಶ ಪಡೆಯಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ 12ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
- ಗದಗ ಜಿಲ್ಲೆಯಲ್ಲಿ ಕೆರೆಗಳಲ್ಲಿ ನೇರ ಗುತ್ತಿಗೆ ಮೂಲಕ ಮೀನುಪಾಶುವಾರು ಹಕ್ಕನ್ನು ಪಡೆಯಲು ಅರ್ಹ ಮೀನುಗಾರಿಕೆ ಸಹಕಾರಿ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರಕಾರದ ಆದೇಶದಲ್ಲಿನ ಗುತ್ತಿಗೆ ನಿಯಮ ಮತ್ತು ಷರುತ್ತುಗಳನ್ವಯ ಅಗತ್ಯ ದಾಖಲಾತಿಗಳೊಂದಿಗೆ ಮೇ 31ರೊಳಗಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮಿನುಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ 9ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದೇ 15 ರಿಂದ 7ದಿನಗಳ ಕಾಲ ಜಮೈಕಾ ಹಾಗೂ ಸೆಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತ ದೇಶದ ಮುಖ್ಯಸ್ಥರೊಬ್ಬರು ಈ ದೇಶಗಳಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ರಾಮನಾಥ್ ಕೋವಿಂದ್ ಅವರು ಮೇ 15 ರಿಂದ ಮೇ 18ರವರೆಗೆ ಜಮೈಕಾದಲ್ಲಿರಲಿದ್ದು, ಅಲ್ಲಿನ ಗವರ್ನರ್ ಜನರಲ್ ಪ್ಯಾಟ್ರಿಕ್ ಅಲೇನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ.
- ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3 ಸಾವಿರದ 451 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಸಕ್ರಿಯ ಪ್ರಕರಣಗಳು ಶೇಕಡ 0.5ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇಕಡ 98.74ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಪರಾಹ್ನ3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ಸೆಣಸಲಿವೆ. ರಾತ್ರಿ 7.30 ಕ್ಕೆ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ19 hours agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ22 hours agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ22 hours agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

