ದಿನದ ಸುದ್ದಿ

ಪ್ರಮುಖ ಸುದ್ದಿ ಮುಖ್ಯಾಂಶಗಳು

Published

on

ಪ್ರಮುಖ ಸುದ್ದಿ ಮುಖ್ಯಾಂಶಗಳು

  1. ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ19ರಂದು ಸ್ವಿಟ್ಜರ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಕೆಲವು ಸಚಿವರು, ಅಧಿಕಾರಿಗಳು ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
  2. ಇಂಜಿನಿಯರಿಂಗ್ ಸೇನಾ ನಾನಾ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪಡೆಯಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ 12ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
  3. ಗದಗ ಜಿಲ್ಲೆಯಲ್ಲಿ ಕೆರೆಗಳಲ್ಲಿ ನೇರ ಗುತ್ತಿಗೆ ಮೂಲಕ ಮೀನುಪಾಶುವಾರು ಹಕ್ಕನ್ನು ಪಡೆಯಲು ಅರ್ಹ ಮೀನುಗಾರಿಕೆ ಸಹಕಾರಿ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರಕಾರದ ಆದೇಶದಲ್ಲಿನ ಗುತ್ತಿಗೆ ನಿಯಮ ಮತ್ತು ಷರುತ್ತುಗಳನ್ವಯ ಅಗತ್ಯ ದಾಖಲಾತಿಗಳೊಂದಿಗೆ ಮೇ 31ರೊಳಗಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮಿನುಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  4. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ 9ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  5. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದೇ 15 ರಿಂದ 7ದಿನಗಳ ಕಾಲ ಜಮೈಕಾ ಹಾಗೂ ಸೆಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತ ದೇಶದ ಮುಖ್ಯಸ್ಥರೊಬ್ಬರು ಈ ದೇಶಗಳಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ರಾಮನಾಥ್ ಕೋವಿಂದ್ ಅವರು ಮೇ 15 ರಿಂದ ಮೇ 18ರವರೆಗೆ ಜಮೈಕಾದಲ್ಲಿರಲಿದ್ದು, ಅಲ್ಲಿನ ಗವರ್ನರ್ ಜನರಲ್ ಪ್ಯಾಟ್ರಿಕ್ ಅಲೇನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ.
  6. ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3 ಸಾವಿರದ 451 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಸಕ್ರಿಯ ಪ್ರಕರಣಗಳು ಶೇಕಡ 0.5ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇಕಡ 98.74ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
  7. ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಪರಾಹ್ನ3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಮತ್ತು ಸನ್‌ರೈಸರ‍್ಸ್ ಹೈದರಾಬಾದ್ ಸೆಣಸಲಿವೆ. ರಾತ್ರಿ 7.30 ಕ್ಕೆ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version