ಕ್ರೀಡೆ
ಮಧ್ಯಾಹ್ನ ಪ್ರಮುಖ ಸುದ್ದಿಗಳು
ಮಧ್ಯಾಹ್ನ ಪ್ರಮುಖ ಸುದ್ದಿಗಳು
- ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದು ರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರಕ್ಕೆ 8 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಇಂದು ಆಯೋಜಿಸಲಾಗಿರುವ ಗರೀಬ್ ಕಲ್ಯಾಣ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳು, ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಇಂದು ಸಂವಾದ ನಡೆಸಲಿದ್ದಾರೆ.
- ಗರೀಬ್ ಕಲ್ಯಾಣ ಸಮ್ಮೇಳನದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಭಗವಂತ್ ಖೂಬ, ಬೀದರ್‌ನ ಡಾ. ಚನ್ನಬಸವೇಶ್ವರ ಪಟ್ಟದೇವರು ರಂಗಮಂದಿರದಿಂದ, ಪ್ರಹ್ಲಾದ್ ಜೋಷಿ, ಧಾರವಾಡದಿಂದ, ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಿಂದ ಮತ್ತು ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಿಂದ ವರ್ಚುವಲ್ ಮೂಲಕ ಪಾಲ್ಗೊಳ್ಳಲಿದ್ದಾರೆ.
- ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ಇಂದು ಆಯೋಜಿಸಲಾಗಿರುವ ಗರೀಬ್ ಕಲ್ಯಾಣ್ ರಾಷ್ಟ್ರಮಟ್ಟದಲ್ಲಿ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಜಾರಿಯಲ್ಲಿರುವ 16 ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ವೇಳೆ ಅವರು, 21 ಸಾವಿರ ಕೋಟಿ ರೂಪಾಯಿ ಅಧಿಕ ಮೌಲ್ಯದ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ.
- ರಾಜ್ಯದಲ್ಲಿ ನಿನ್ನೆ ಹೊಸದಾಗಿ 166 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರದ106 . ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚು 159ಪ್ರಕರಣಗಳು, ದಾಖಲಾಗಿವೆ.
- ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಪ್ಯಾಂಫರ್ಸ್ ಪಕ್ಷದ ಮುಖ್ಯಸ್ಥ ಪ್ರೋಫೆಸರ್ ಭೀಮ್‌ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಜಮ್ಮುವಿನ ತಮ್ಮ ನಿವಾಸದಲ್ಲಿ ಇಂದು ನಿಧನರಾದರು. ಅವರಿಗೆ 81ವರ್ಷವಯಸ್ಸಾಗಿತ್ತು.
- ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೊಯರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದ ಲೆಹರ್ ಸಿಂಗ್, ಬಿಜೆಪಿ ರಾಜ್ಯ ಘಟಕದ ಖಜಾಂಚಿಯಾಗಿಯೂ ಕೆಲಸ ಮಾಡಿದ್ದಾರೆ. ಈಗಾಗಲೇ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಇಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
- ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಿನ್ನೆ ರಾತ್ರಿ ಗ್ಯಾಬೋನ್‌ನ ಲಿಬ್ರೆವಿಲ್ಲೆಗೆ ತಲುಪಿದ್ದಾರೆ. ಉಪರಾಷ್ಟ್ರಪತಿ ಗ್ಯಬೊನ್, ಸೆನೆಗಲ್ ಮತ್ತು ಕತಾರ್‌ಗೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಗ್ಯಾಬೊನ್ ಪ್ರಧಾನಿ ರೋಸ್ ಕ್ರಿಸ್ಟಿಯಾನೆ ಒಸ್ಸೌಕಾ ರಾಪೊಂಡಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಮೈಕೆಲ್ ಮೌಸಾ ಅಡಾಮೊ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
- ಒಡಿಶಾ, ಕೇರಳ ಮತ್ತು ಉತ್ತರಾಖಂಡ್‌ನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಜೂನ್ 3 ರಂದು ಚುನಾವಣೆ ನಡೆಸಲಿದೆ.
- ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವಿರದ 338ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 2 ಸಾವಿರದ 134 ಸೋಂಕಿತರು ಚೇತರಿಸಿಕೊಂಡಿದ್ದು, 18 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
- ಕೋವಿಡ್ ವಿರುದ್ಧದ ಸಾರ್ವತ್ರಿಕ ಲಸಿಕಾ ಅಭಿಯಾನದಡಿ ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ 13 ಲಕ್ಷ 33ಸಾವಿರದ 64 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಇದುವರೆಗೆ 193 ಕೋಟಿ, 45 ಲಕ್ಷ 19 ಸಾವಿರದ 805ಲಸಿಕಾ ಡೋಸ್ ಗಳನ್ನು ನೀಡಿದಂತಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
- ಜಮ್ಮು ಮತ್ತು ಕಾಶ್ಮೀರದ ಅವಾಂತಿಪೋರ್‌ನ ರಾಜ್ಪೋರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243