ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ್ದ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಡೆಯಿತು. ಕರಗ ಶಕ್ತ್ಯುತ್ಸವ ನಿನ್ನೆ ರಾತ್ರಿ12.30ಕ್ಕೆ ಆಯೋಜಿಸಲಾಗಿತ್ತು. ಧರ್ಮರಾಯ ಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಲಾಗಿತ್ತು. ಬೆಂಗಳೂರಿನಲ್ಲಿ ಕರಗ ಉತ್ಸವದ ಸಂಭ್ರಮ ಮನೆಮಾಡಿತ್ತು.
- ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಎರಡು ದಿನಗಳ ರಾಜ್ಯ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಪ್ರಗತಿಯಲ್ಲಿದೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಮಾರ್ಚ್ ತಿಂಗಳಲ್ಲಿ ಕಾರ್ಯಕಾರಿಣಿ ಸಭೆ ನಡೆಯಬೇಕಿತ್ತು, ಆದರೆ ರಾಜ್ಯ ಬಜೆಟ್ ಕಾರಣ ಸಭೆ ನಡೆದಿರಲಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
- ಆಯುಷ್ಮಾನ್ ಭಾರತ್ ಆರೋಗ್ಯ ಹಾಗೂ ಕ್ಷೇಮ ಯೋಜನೆಯ ೪ನೇ ವರ್ಷಾಚರಣೆಯ ಅಂಗವಾಗಿ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವೀಯ ಇಂದು ದೇಶದ ಒಂದು ಲಕ್ಷ ಕೇಂದ್ರಗಳಲ್ಲಿ ಇ-ಸಂಜೀವಿನಿ ಟೆಲಿ ಸಮಾಲೋಚನೆ ಸೌಲಭ್ಯಗಳಿಗೆ ಚಾಲನೆ ನೀಡಿದರು. ಟೆಲಿ ಸಮಾಲೋಚನಾ ಸೇವೆಯಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದಿದ್ದು, ಇದಕ್ಕಾಗಿ ಪ್ರಶಂಸನಾ ಪತ್ರ ಲಭಿಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿ, ಇದು ರಾಜ್ಯಕ್ಕೆ ಸಂದ ಮಹತ್ವದ ಗೌರವ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರದಂದು ಗಾಂಧಿನಗರದ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಫಾರ್ ಸ್ಕೂಲ್ಸ್ಗೆ ಭೇಟಿ ನೀಡಲಿದ್ದಾರೆ. ಈ ಕೇಂದ್ರ ಪ್ರತಿ ವರ್ಷ 500 ಕೋಟಿ ದತ್ತಾಂಶವನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಇದನ್ನು ಅರ್ಥಪೂರ್ಣವಾಗಿ ವಿಶ್ಲೇಷಿಸಿ ಕೃತಕ ಬುದ್ಧಿಮತ್ತೆ ಹಾಗೂ ಮಷಿನ್ ಲರ್ನಿಂಗ್ ಕಲಿಕೆಗೆ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳ ಒಟ್ಟಾರೆ ಕಲಿಕೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ.
- ಚೈತ್ರ ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ, ಮಲ್ಲಿಗೆಯ ಕಂಪಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವಯುತವಾಗಿ ಜರುಗಿತು. ನಿನ್ನೆ ತಡರಾತ್ರಿ ಧರ್ಮರಾಯ ದೇವಸ್ಥಾನದಿಂದ ಹೊರಟ ಹೂವಿನ ಕರಗಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಸಂಜೆ ಸುರಿದ ಭಾರೀ ಮಳೆ ನಡುವೆಯೂ ದೇವಾಲಯದಲ್ಲಿ ಹೋಮ-ಹವನ ಸೇರಿ ಧಾರ್ಮಿಕ ವಿಧಿ ವಿಧಾನಗಳು ಸಾಂಗವಾಗಿ ಜರುಗಿದವು. ಉತ್ಸವದಲ್ಲಿ ರಾಜಕೀಯ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಹಲವು ಕ್ಷೇತ್ರಗಳ ಗಣ್ಯರು ಪಾಲ್ಗೊಂಡಿದ್ದರು.
- ಎರಡು ದಿನಗಳ ರಾಜ್ಯ ಬಿಜೆಪಿ ಕಾರಿಣಿ ಸಭೆಗೆ ಇಂದು ತೆರೆ ಬೀಳಲಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರ ಗಣ್ಯರು ಹೊಸಪೇಟೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಇಂದು ಭಾಗಿಯಾಗಲಿದ್ದಾರೆ. ನಿನ್ನೆ ಕಾರ್ಯಕಾರಿಣಿ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಒಟ್ಟಿಗೆ ಶ್ರಮಿಸೋಣ ಎಂದು ಹೇಳಿದ್ದಾರೆ.
- ಪರೀಕ್ಷಾ ಪೇ ಚರ್ಚಾ ಸಂವಹನಗಳ ಒಳನೋಟಗಳನ್ನು ನಮೋ ಆಪ್ನ ಹೊಸ ಕ್ಯುರೇಟೆಡ್ ವಿಭಾಗದಲ್ಲಿ ಕಾಣಬಹುದಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, “ನಮ್ಮ ಕ್ರಿಯಾತ್ಮಕ ಪರೀಕ್ಷಾ ಸೇನಾನಿಗಳ ಜತೆ ಸಂವಹನ ನಡೆಸಲು ತಮಗೆ ಆನಂದವಾಗುತ್ತದೆ. ಪರೀಕ್ಷಾ ಪೇ ಚರ್ಚಾ ಜೀವನ ಮತ್ತು ಪರೀಕ್ಷೆಗೆ ಸಂಬಂಧಿಸಿದ ಹಲವು ವಿಷಯಗಳಿಗೆ ಉಜ್ವಲ ವೇದಿಕೆಯಾಗಿದೆ. ಈ ಎಲ್ಲಾ ಸಂವಹನಗಳ ಒಳನೋಟಗಳನ್ನು ನಮೋ ಅಪ್ಲಿಕೇಶನ್ ನಲ್ಲಿ ಹೊಸದಾಗಿ ಸಂಗ್ರಹಿಸಲಾದ ವಿಭಾಗದಲ್ಲಿ ಕಾಣಬಹುದಾಗಿದೆ” ಎಂದು ಹೇಳಿದ್ದಾರೆ.
- ಉತ್ತರ ಪ್ರದೇಶ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ನಿನ್ನೆ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ತಮ್ಮ ಪತ್ನಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಹೊಸದಾಗಿ ನಿರ್ಮಿಸಲಾದ ಕಾಶಿ ವಿಶ್ವನಾಥ ಧಾಮವನ್ನು ಸಹ ವೀಕ್ಷಿಸಿದರು.
- ಜಪಾನ್ನಲ್ಲಿ ಜನಸಂಖ್ಯೆ ಪ್ರಮಾಣ ಗಣನೀಯವಾಗಿ ಕುಸಿತವಾಗಿದೆ. ಜಪಾನ್ ಸರ್ಕಾರದ ಅಂಕಿ-ಅಂಶಗಳ ಪ್ರಕಾರ 2021ರಲ್ಲಿ 6ಲಕ್ಷದ ೪೪ ಸಾವಿರದಷ್ಟು ಜನಸಂಖ್ಯೆ ಕುಸಿತಕಂಡಿದೆ. ಸತತ 11ನೇ ವರ್ಷ ಜನಸಂಖ್ಯೆಯಲ್ಲಿ ಕುಸಿತವಾಗಿದ್ದು, 1950ರ ನಂತರ ಹೋಲಿಕೆ ಮಾಡಿದರೆ ಇದು ಅತ್ಯಂತ ಹೆಚ್ಚಿನ ಪ್ರಮಾಣದ ಕುಸಿತವಾಗಿದೆ ಎಂದು ತಿಳಿಸಿದೆ.
- ಪರೋಪಕಾರಿ ಮತ್ತು ಮಾನವತಾವಾದಿ ಬಿಲ್ಕಿಸ್ ಈಧಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವೀಟ್ ಸಂದೇಶದಲ್ಲಿ ಅವರು, “ಬಲ್ಕಿಸ್ ಈಧಿ ನಿಧನಕ್ಕೆ ನನ್ನ ಪ್ರಾಮಾಣಿಕ ಸಂತಾಪಗಳು. ಮಾನವೀಯ ಕೆಲಸಕ್ಕಾಗಿ ಈಕೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದು, ಇವರ ಕರ್ತವ್ಯ ಜಗತ್ತಿನಾದ್ಯಂತ ಮುಟ್ಟಿದೆ. ಭಾರತದ ಜನತೆ ಕೂಡ ಈಕೆಯನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೇ 22 | ಇಂದಿನ ಅಡಿಕೆ ದರ

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ):
ಶಿವಮೊಗ್ಗ ಮಾರುಕಟ್ಟೆ:
ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429
ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):
ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767
ಸಾಗರ ಮಾರುಕಟ್ಟೆ (ಶಿವಮೊಗ್ಗ):
ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621
ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):
ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729
ಚಿತ್ರದುರ್ಗ ಮಾರುಕಟ್ಟೆ:
ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ