Connect with us

ದಿನದ ಸುದ್ದಿ

ಜಿಲ್ಲೆಯ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಆಧಾರ್ ನೊಂದಣಿ ಮಾಡಿಸಿ : ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಬಾಲಕ, ಬಾಲಕಿಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ಮತ್ತು ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕುರಿತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದ ಭಾಗವಾಗಿ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಮಹಾವೀರ ಮ. ಕರೆಣ್ಣವರ ಇವರು ಸಾಥಿ ಸಮಿತಿಯನ್ನು ರಚಿಸಲಾಗಿದ್ದು, ಸಾಥಿ ಕಮಿಟಿಯ ಮೂಲಕ ಜಿಲ್ಲೆಯಾದ್ಯಂತ ಅಧಾರ್ ನೊಂದಣಿ ಆಗದ ನಿರ್ಗತಿಕ ಮಕ್ಕಳು, ಕುಟುಂಬದಿಂದ ಹೊರಗಡೆ ಉಳಿದ ಮಕ್ಕಳು, ರಕ್ಷಣೆ ಇಲ್ಲದ ಮಕ್ಕಳು ಕೊಳಗೇರಿ ನಿವಾಸಿಗಳು, ರೈಲ್ವೆ ನಿಲ್ದಾಣದ ಮತ್ತು ಬಸ್ ನಿಲ್ದಾಣಗಳಲ್ಲಿ ವಾಸಿಸುವ ನಿರ್ಗತಿಕ ಮಕ್ಕಳು, ಮಕ್ಕಳ ಆರೈಕೆ ಸಂಸ್ಥೆಗಳಲ್ಲಿ ವಾಸಿಸುವ ಅನಾಥರು. ಕಾನೂನು ಬಾಹಿರಕೃತ್ಯಗಳಲ್ಲಿ ತೊಡಗಿರುವ ಮಕ್ಕಳು, ಕಳ್ಳ ಸಾಗಾಣಿಕೆ, ಭಿಕ್ಷಾಟನೆ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟವರು, ಕಾಣೆಯಾದವರಲ್ಲಿ ಸಿಕ್ಕಂತಹ ಮಕ್ಕಳು, ಇತ್ಯಾದಿ ನಿರ್ಗತಿಕ ಮಕ್ಕಳ ಬಗ್ಗೆ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ ಅವರುಗಳಿಗೆ ಆಧಾರ್ ಗುರುತಿನ ಚೀಟಿ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುವುದು.

ಕಾನೂನು ಸೇವೆಗಳ ಪ್ರಾಧಿಕಾರದ ಮತ್ತು ಸಮಿತಿಯ ಉದ್ದೇಶಗಳನ್ನು ಪೂರೈಸುವಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು, ಶಾಲಾ ಶಿಕ್ಷಕರು ಮುಖ್ಯೋಪಾಧ್ಯಾಯರು ಹಾಗೂ ಇತರೆ ಅಧಿಕಾರಿಗಳು, ಪಾಲಕ ಮತ್ತು ಪೋಷಕರು ಸಹಕಾರ ನೀಡಬೇಕು.ಇಲ್ಲಿಯವರೆಗೆ ಒಟ್ಟು 42 ಅನಾಥ, ನಿರ್ಗತಿಕ ಮಕ್ಕಳು, ಸರ್ಕಾರಿ ಮತ್ತು ಅನುದಾನಿತ ತಂಗುದಾಣಗಳಲ್ಲಿ ವಾಸಿಸುವ ಮಕ್ಕಳಿಗೆ ಪಾಲಕ, ಪೋಷಕರು ಇಲ್ಲದ ಆಧಾರ್ ಗುರುತಿನ ಚೀಟಿಗಳು ಇಲ್ಲವೆಂದು ತಿಳಿದು ಬಂದಿದೆ. ಅದೇ ರೀತಿ ಜಿಲ್ಲೆಯಲ್ಲಿ ಒಟ್ಟು 6050 ಪ್ರಾಥಮಿಕ ಶಾಲಾ ಮಕ್ಕಳಿಗೆ ಮತ್ತು 2451 ಪ್ರೌಢಶಾಲಾ ಮಕ್ಕಳಿಗೆ ಆಧಾರ್ ಗುರುತಿನ ಚೀಟಿ ಇಲ್ಲವೆಂದು ತಿಳಿದು ಬಂದಿರುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿರುತ್ತದೆ.

ಮೇಲ್ಕಂಡ ಸಾಥಿ ಅಭಿಯಾನಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು, ಮಕ್ಕಳ ಪಾಲಕ ಪೋಷಕರು ಹಾಗೂ ಎಲ್ಲರೂ ಕೂಡ ಸಹಕರಿಸಬೇಕೆಂದು ಮತ್ತು ಅತ್ಯುತ್ತಮವಾದ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ ಕರೆಣ್ಣವರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

View this post on Instagram

 

A post shared by Resmi R Nair (@resmirnair_model)

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending