ದಿನದ ಸುದ್ದಿ
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಸುದ್ದಿದಿನ,ಬೆಂಗಳೂರು : ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.
ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.
ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ.
ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.
ಸಾರ್ವಜನಿಕರಲ್ಲಿ ಮನವಿ
ಭಾರತದ ಎಲ್ಲಾ ಪ್ರಜೆಗಳಲ್ಲೂ ರಾಷ್ಟ್ರ ಪ್ರೇಮ ಮತ್ತು ರಾಷ್ಟ್ರ ಭಕ್ತಿಯನ್ನು ಇಮ್ಮಡಿಗೊಳಿಸುವ ಈ ಅಭಿಯಾನದಲ್ಲಿ ಸಾರ್ವಜನಿಕರೂ ಕೂಡಾ ಕೈಮಗ್ಗ ಅಥವಾ ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇಷ್ಮೆ, ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರ ಧ್ವಜವನ್ನು ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಅವಧಿಯಲ್ಲಿ ರಾಜ್ಯಾದ್ಯಂತ ಇರುವ ಕೋಟಿಗೂ ಹೆಚ್ಚು ಮನೆಗಳ ಮೇಲೆ ಹಾರಿಸಿ ದೇಶ ಪ್ರೇಮ ಮೆರೆಯಬೇಕೆಂಬುದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಆದಕಾರಣ, ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ಮುಖ್ಯ ಕಾರ್ಯದರ್ಶಿ ಸಾರ್ವಜನಿಕರಲ್ಲಿ ವಿಶೇಷ ಮನವಿ ಮಾಡಿದ್ದಾರೆ.
ಅಲ್ಲದೆ, ರಾಷ್ಟ್ರ ಧ್ವಜದ ಮುಂದೆ ನಿಂತು ಸೆಲ್ವಿ ತೆಗೆದು ಹರ್ ಘರ್ ತಿರಂಗಾ ಅಂತರ್ಜಾಲ ತಾಣ https://harghartiranga.com ರಲ್ಲಿ ಅಪ್ ಲೋಡ್ ಮಾಡುವ ಮೂಲಕ ಪ್ರತಿಯೊಬ್ಬರೂ ರಾಷ್ಟ್ರ ಪ್ರೇಮವನ್ನು ದುಪ್ಪಟು ಗೊಳಿಸುವ ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ ದೇಶಾಭಿಮಾನವನ್ನು ಪ್ರದರ್ಶಿಸೋಣ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ3 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್
-
ದಿನದ ಸುದ್ದಿ5 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ3 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ2 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ2 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ