ದಿನದ ಸುದ್ದಿ
ಇಂದು ಮಕ್ಕಳ ಕವಿಗೋಷ್ಠಿ
ಸುದ್ದಿದಿನ ಡೆಸ್ಕ್ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಬರಹಗಾರರ ಸಂಘದಿಂದ ಭಾನುವಾರ ಸಂಜೆ 4 ಗಂಟೆಗೆ ರಾಜ್ಯ ಮಟ್ಟದ ಕವಿಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯಮಟ್ಟದ ಮೊಟ್ಟ ಮೊದಲ ಮಕ್ಕಳ ಕವಿಗೋಷ್ಠಿಯಲ್ಲಿ ಕರ್ನಾಟಕದ ಪ್ರತಿ ಜಿಲ್ಲೆಗಳಿಂದ ಮತ್ತುಗೋವಾ,ಕೇರಳ,
ಮಹಾರಾಷ್ಟ್ರರಾಜ್ಯಗಳ ಮಕ್ಕಳು ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧುನಾಯ್ಕ್ ಲಂಬಾಣಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,
ಕವಿಗೋಷ್ಠಿಯ ಅಧ್ಯಕತೆಯನ್ನು ಶ್ರೀ ಕೆ.ಬಾರವಲಿ ಬಾವಿಹಳ್ಳಿ ವಹಿಸಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀ ರಫಿ ರಿಪ್ಪನಪೇಟೆ ಮತ್ತು ಶಿವಮೊಗ್ಗ ಜಿಲ್ಲಾ ಬರಹಗಾರರ ಬಳಗದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಎಚ್.ನಾಗೇಂದ್ರಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243