ದಿನದ ಸುದ್ದಿ

ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ.23 ರೊಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version