ರಾಜಕೀಯ
ರಾಜ್ಯಸಭಾ ಚುನಾವಣೆಗೆ ಖರ್ಗೆ : ಸಿದ್ದರಾಮಯ್ಯ ಅಭಿನಂದನೆ
ಸುದ್ದಿದಿನ,ಕಲಬುರಗಿ: ಜೂನ್-18ರಂದು ರಾಜ್ಯದಲ್ಲಿ ಖಾಲಿಯಾಗಲಿವರುವ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಇನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ನಿಂದ ಕಾಂಗ್ರೆಸ್ ಹಿರಿಯ ಮುಖಂಡರಾದ ಡಾ.ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಹೈಕಮಾಂಡ್ ಅಂತಿಮಗೊಳಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಮುಖುಲ್ ವಾಷ್ನಿಕ್, ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನ, ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ಘೋಷಣೆ ಮಾಡುತ್ತಿರುವುದಾಗಿ ಪತ್ರಿಕೆ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ದಿನಾಂಕ 25-06-2020ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಡಿ.ಕುಪೇಂದ್ರ ರೆಡ್ಡಿ, ಪ್ರಭಾಕರ್ ಕೋರೆ, ರಾಜೀವ್ ಗೌಡ ಎಂ ವಿ ಮತ್ತು ಬಿಕೆ ಹರಿಪ್ರಸಾದ್ ಅವರ ಅವಧಿ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ತೆರವಾಗುತ್ತಿರುವ ಸ್ಥಾನಗಳಿಗೆ ದಿನಾಂಕ 19-06-2020ರಂದು ಚುನಾವಣೆ ನೆಡಸುವುದಾಗಿ ಘೋಷಣೆ ಮಾಡಿತ್ತು.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಹಿರಿಯ ಮುತ್ಸದ್ದಿ ನಾಯಕ ಮಲ್ಲಿಕಾರ್ಜುನ ಖರ್ಗೆ @kharge ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.
ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ನಾಯಕರಾದ @RahulGandhi ಅವರಿಗೆ ಧನ್ಯವಾದಗಳು. pic.twitter.com/qBnUoCBicL
— Siddaramaiah (@siddaramaiah) June 5, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243