ದಿನದ ಸುದ್ದಿ
ದನಗಳ ಮೈತೊಳೆಯಲು ಕಾಲುವೆಗೆ ಇಳಿದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಸಾವು
ಸುದ್ದಿದಿನ, ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ದನಗಳ ಮೈ ತೊಳೆಯಲು ಕಾಲುವೆಗೆ ಇಳಿದಿದ್ದ ರೈತ ರಮೇಶ್(45). ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಮೃತ ರಮೇಶ್ ಪತ್ನಿ ಅಂಬಿಕ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂಚನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ನಂಜಶೆಟ್ಟರ ಮಗ ರಮೇಶ್ ನಿನ್ನೆ ಸಂಜೆ ದನಗಳಿಗೆ ನೀರು ಕುಡಿಸಿ ಮೈತೊಳೆಲು ಕಾಲುವೆಗೆ ಇಳಿದಾಗ ಈ ದುರ್ಘಟನೆ ನಡೆದಿದೆ.
ಘಟನೆಯ ಬಗ್ಗೆ ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಬ್ ಇನ್ಸ್ ಪೆಕ್ಟರ್ ಆನಂದಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಯಪ್ರಕಾಶ್ ಶವದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಶವವನ್ನು ಹಸ್ತಾಂತರಿಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401