ದಿನದ ಸುದ್ದಿ
ಮಂಡ್ಯ : ರೈತರ ಸರಣಿ ಆತ್ಮಹತ್ಯೆ ; ಸಚಿವ ಡಿ.ಸಿ.ತಮ್ಮಣ್ಣ ಭೇಟಿ
ಸುದ್ದಿದಿನ, ಮದ್ದೂರು : ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಕುಮಾರ್ ಎಂಬ(38)ರೈತ ಶಿಂಷಾ ನದಿ ದಡದ ಅವರ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಸುಮಾರು 6 ಲಕ್ಷ ಸಾಲ ಮಾಡಿಕೊಂಡಿದ್ದರು, ಆಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದು, ಪತ್ನಿ ಶೋಭ ನೀಡಿದ ದೊರಿನ ಮೇರಿಗೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೃತರಿಗೆ ಸಿಂಡಿಕೇಟ್ ಬ್ಯಾಂಕ್ ಸೋಮನಹಳ್ಳಿ ಸಹಕಾರ ಬ್ಯಾಂಕ್ ನಲ್ಲಿ ಮತ್ತು ಕೈ ಸಾಲ ಇತ್ತು ಎಂದು ತಿಳಿದು ಬಂದಿದೆ.ಇಂದು ಬೆಳಗ್ಗೆ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿ ನೋಟಿಸ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಸಚಿವರ ಭೇಟಿ
ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಸ್ಥಳಕ್ಕೆ ಭೇಟಿ ನೀಡಿ ಮೃತರ ಪತ್ನಿ ಗೆ ಸಾಂತ್ವನ ಹೇಳಿದರು. ಅದಷ್ಟು ಬೇಗ ಸರಕಾರದಿಂದ ಸಿಗುವ ಪರಿಹಾರ ಕೊಡಿಸುವುದಾಗಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401