ರಾಜಕೀಯ
ಮಂಡ್ಯ : ಲೋಕಸಭಾ ಉಪ ಚುನಾವಣೆ ಘೋಷಣೆ
ಸುದ್ದಿದಿನ,ಮಂಡ್ಯ: ಭಾರತ ಚುನಾವಣಾ ಆಯೋಗಯು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿದ್ದು, ಅಕ್ಟೋಬರ್ 9, 2018ಕ್ಕೆ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದೆ. ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ.
ಅಕ್ಟೋಬರ್ 20 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದು, ನವೆಂಬರ್ 3 ರಂದು ಮತದಾನ ನಡೆಯಲಿದೆ. ನವೆಂಬರ್ 6 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.ಉಪ ಚುನಾವಣೆಯಲ್ಲಿ ಮತಯಂತ್ರಗಳ ಜೊತೆಗೆ ಮತ ಖಾತ್ರಿ ಪಡೆಸುವ ವಿವಿಪ್ಯಾಟ್ ಅನ್ನು ಬಳಸಲಾಗುತ್ತಿದೆ. ಚುನಾವಣಾ ನೀತಿ ಸಂಹಿತೆ ಇಂದಿನಿಂದಲ್ಲೇ ಜಾರಿಯಲ್ಲಿದ್ದು, ನವೆಂಬರ್ 8 ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401