ರಾಜಕೀಯ
ಮಂಡ್ಯ ಲೋಕಸಭಾ ಉಪಚುನಾವಣೆ : ವಿಕಲಚೇತನರಿಗೆ ಮತದಾನ ಮಾಡಲು ವಾಹನ ಸೌಲಭ್ಯ
ಸುದ್ದಿದಿನ,ಮಂಡ್ಯ : ನವೆಂಬರ್ 3 ರಂದು ನಡೆಯುವ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ವಿಕಲಚೇತನರು ಮತದಾನದಲ್ಲಿ ಭಾಗಿಯಾಗಲು ಪ್ರತಿ ಗ್ರಾಮಪಂಚಾಯತಿಗಳಿಂದ ವಾಹನ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 1609, ಪಾಂಡವಪುರ ತಾಲ್ಲೂಕಿನಲ್ಲಿ 307, ನಾಗಮಂಗಲ ತಾಲ್ಲೂಕಿನಲ್ಲಿ 343, ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 1976, ಮಂಡ್ಯ ತಾಲ್ಲೂಕಿನಲ್ಲಿ 851, ಮದ್ದೂರು ತಾಲ್ಲೂಕಿನಲ್ಲಿ 491, ಮಳವಳ್ಳಿ ತಾಲ್ಲೂಕಿನಲ್ಲಿ 572 ಹಾಗೂ ಕೆ.ಆರ್.ನಗರ ತಾಲ್ಲೂಕಿನಲ್ಲಿ 2318 ವಿಕಲಚೇತನರು ಮಂಡ್ಯ ಲೋಕಸಭಾ ಉಪಚುನಾವಣೆಯ ಮತದಾನದಲ್ಲಿ ಭಾಗಿಯಾಗುತ್ತಿದ್ದು, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕ ಕಲ್ಯಾಣಾಧಿಕಾರಿಗಳ ಸಮನ್ವಯದೊಂದಿಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಮತ್ತು ಯೋಜನಾಧಿಕಾರಿಗಳು ಅಗತ್ಯಕ್ಕೆ ಅನುಗುಣವಾಗಿ ವಿಕಲಚೇತನರಿಗೆ ಬೇಕಾದಂತಹ ವಾಹನ ಸೌಲಭ್ಯದ ವ್ಯವಸ್ಥೆಯ ಮೇಲುಸ್ತುವಾರಿ ಮಾಡುವರು ಎಂದು ಅವರು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ 22 ಗ್ರಾಮಪಂಚಾಯತಿಗಳಿಗೆ, ಪಾಂಡವಪುರ ತಾಲ್ಲೂಕಿನ 24 ಗ್ರಾಮಪಂಚಾಯತಿಗಳಿಗೆ, ನಾಗಮಂಗಲ ತಾಲ್ಲೂಕಿನ 27 ಗ್ರಾಮಪಂಚಾಯತಿಗಳಿಗೆ, ಕೆ.ಆರ್.ಪೇಟೆ ತಾಲ್ಲೂಕಿನ 35 ಗ್ರಾಮಪಂಚಾಯತಿಗಳಿಗೆ, ಮಂಡ್ಯ ತಾಲ್ಲೂಕಿನ 43 ಗ್ರಾಮಪಂಚಾಯಿತಿಗಳಿಗೆ, ಮದ್ದೂರು ತಾಲ್ಲೂಕಿನ 42 ಗ್ರಾಮಪಂಚಾಯತಿಗಳಿಗೆ, ಮಳವಳ್ಳಿ ತಾಲ್ಲೂಕಿನ 39 ಗ್ರಾಮಪಂಚಾಯಿತಿಗಳಿಗೆ, ಕೆ.ಆರ್.ನಗರ ತಾಲ್ಲೂಕಿನ 33 ಗ್ರಾಮಪಂಚಾಯತಿಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲ ಪಡಿಸಲು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ವಿಕಲಚೇತನರ ಮನೆ ಬಾಗಿಲಿಗೆ ಸೌಲಭ್ಯ ನೀಡಲಾಗಿದ್ದು, ವಿಕಲಚೇತನರಾದವರು ಮತದಾನದ ದಿನದಂದು ಮನೆಯಿಂದ ಕರೆದುಕೊಂಡು ಹೋಗುವ ಹಾಗೂ ಬಿಡುವ (ಪಿಕ್‍ಅಪ್ ಅಂಡ್ ಡ್ರಾಫ್) ಸೇವೆಯನ್ನು ಪಡೆಯಬಹುದಾಗಿದೆ. ಇದಕ್ಕಾಗಿ “chunavana” ಹೆಸರಿನ ಆಪ್ ಅನ್ನು ಅಭಿವೃದ್ಧಿ ಪಡಿಸುವ ಮೂಲಕ ವಿಕಲಚೇತನರ ಮತದಾನದ ಹಕ್ಕಿಗೆ ವಿಶೇಷ ಮಾನ್ಯತೆ ನೀಡಲಾಗಿದೆ. “chunavana” ಆ್ಯಪ್‍ನಲ್ಲಿ ನೋಂದಣಿ ಮಾಡುವ ಮೂಲಕ ನವೆಂಬರ್ 3 ರಂದು ಮನೆ ಬಾಗಿಲಿಗೆ ಸಾರಿಗೆ ಸೌಲಭ್ಯವನ್ನು ಪಡೆಯಬಹುದು. ಅಕ್ಟೋಬರ್ 29 ರಿಂದ ನವೆಂಬರ್ 1 ರ ರಾತ್ರಿ 11.59 ಗಂಟೆಯವರೆಗೆ ನೊಂದಣಿ ಮಾಡಿಕೊಳ್ಳಲು ಸಮಯಾವಕಾಶವಿರುತ್ತದೆ. ಈ ಸೌಲಭ್ಯವನ್ನು ವಿಕಲಚೇತನರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 1795 ಮತಗಟ್ಟೆ ಕೇಂದ್ರಗಳಿದ್ದು, ಗಾಲಿಕುರ್ಚಿಗಳ ಅವಶ್ಯವಿರುವ 1297 ಮತಗಟ್ಟೆ ಕೇಂದ್ರಗಳಿಗೆ 1297 ಗಾಲಿಕುರ್ಚಿಗಳನ್ನು ಖರೀದಿಸಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.
ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.
ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.
18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.
ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.
ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ

ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.
ಈ ಯೋಜನೆಗಳ ಜಾರಿ ಹೇಗೆ, ಫಲಾನುಭವಿಗಳ ಆಯ್ಕೆ ಮಾನದಂಡ, ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ

ಸುದ್ದಿದಿನ, ಬೆಂಗಳೂರು: ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದು, ಈ ಕುರಿತು ಇಂದು ಉಪಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ವಿಧಾನಸೌಧದಲ್ಲಿ ನಡೆಯುವ ಸಚಿವರುಗಳ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆಯಲಿವೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ