/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಮಂಡ್ಯ ಲೋಕಸಭೆ ಉಪಚುನಾವಣೆ : ನವೆಂಬರ್ 1ರ ಸಂಜೆ 6 ಗಂಟೆಯಿಂದ ನಿಷೇದಾಜ್ಞೆ ಜಾರಿ

Published

on

ಸುದ್ದಿದಿನ, ಮಂಡ್ಯ: ಮಂಡ್ಯ ಲೋಕಸಭಾ ಉಪಚುನಾವಣೆಗೆ ಮತದಾನವು ನವೆಂಬರ್ 3 ನಡೆಯಲಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನವೆಂಬರ್ 1ರ ಸಂಜೆ 6 ಗಂಟೆಯಿಂದ ನವೆಂಬರ್ 3ರ ಸಂಜೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯ ಎಲ್ಲಾ 7 ವಿಧಾನ ಸಭಾ ಚುನಾವಣಾ ಕ್ಷೇತ್ರಗಳ ಮತಗಟ್ಟೆಗಳ ವ್ಯಾಪ್ತಿಗೆ ಆದೇಶವು ಒಳಪಟ್ಟಿದ್ದು, ಎಲ್ಲಾ ಮತಗಟ್ಟೆಗಳ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ನಿಷೇದಾಜ್ಞೆ ಇರುವ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ, ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ. ಪಟಾಕಿ, ಸಿಡಿಮದ್ದು ಹಾಗೂ ಇತರೆ ಸ್ಪೋಟಕಗಳನ್ನುಉಪಯೋಗಿಸುವಂತಿಲ್ಲ ಹಾಗೂ ಮನೆ ಮನೆಗೆ ತೆರಳಿ ನಡೆಸುವ ಪ್ರಚಾರದಲ್ಲಿ 10 ಜನರ ಸಂಖ್ಯೆಯನ್ನು ಮೀರಬಾರದು. ಮದುವೆ, ಶವ ಸಂಸ್ಕಾರ ಕಾರ್ಯಗಳಿಗೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣಾ ನೇಮಿಸಲ್ಪಟ್ಟಿರುವ ಅಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂಬ ಷರತ್ತುಗಳು ಆದೇಶದಲ್ಲಿ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version