ದಿನದ ಸುದ್ದಿ
ಮಂಡ್ಯ | ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬಡ್ತಿ ಹೊಂದಿದ ರಾಮಲಿಂಗಯ್ಯ
ಸುದ್ದಿದಿನ,ಮಂಡ್ಯ : ಮದ್ದೂರು ತಾಲ್ಲೂಕಿನ ಸಹಾಯಕ ನಿರ್ದೇಶಕರಾದ ( ಗ್ರಾಮೀಣ ಉದ್ಯೋಗ ) ಶ್ರೀ ರಾಮಲಿಂಗಯ್ಯ ನವರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿಗೆ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಬಡ್ತಿ ಹೊಂದಿದ್ದರಿಂದ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಸನ್ಮಾನಿಸಿ ಬಿಳ್ಕೋಡಲಾಯಿತು.
ನಂತರ ಮಾತನಾಡಿ ಒಂದು ವರ್ಷದಿಂದ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ತಾಲ್ಲೂಕಿನಲ್ಲಿ ಹೆಚ್ಚಿನ ಸಾಧನೆ ಮಾಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು , ತಾಂತ್ರಿಕ ಸಹಾಯಕರಲ್ಲಿ ನನ್ನಿಂದ ಯಾವುದಾದರೂ ಲೋಪ ದೋಷಗಳು ಆಗಿದ್ದರೆ ಕ್ಷಮೆಯಿರಲಿ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಣಿಕಂಠ , ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸತೀಶ್ , ರಮೇಶ್ ಪಿಡಿಒ ಮಂಜುನಾಥ್ , ಲೀಲಾವತಿ , ಜಯಶ್ರೀ , ದೇವರಾಜ್ , ಚೈತ್ರ ಹಾಗೂ ಇತರರು ಹಾಜರಿದ್ದರು.
ವರದಿ : ಗಿರೀಶ್ ರಾಜ್
ಸುದ್ದಿದಿನ.ಕಾಂ|ವಾಟ್ಸಾಪ್|9980346243