ರಾಜಕೀಯ
ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ನಿಂದನೆ: ಮಂಗಳೂರಿನಲ್ಲಿ ವ್ಯಕ್ತಿ ಬಂಧನ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಫೇಸ್‌ಬುಕ್ ಅಡ್ಮಿನ್ ಒಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸ್ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಮಂಗಳೂರು ಮೂಲದ 24 ವರ್ಷದ ಪ್ರಶಾಂತ ಪೂಜಾರಿ ಎಂಬಾತ ತನ್ನ ಕುಡ್ಲಾ ಟ್ರಾಲರ್ಸ್ ಎಂಬ ಫೇಸ್‌ಬುಕ್ ಪುಟದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುರಿತು ಅವಹೇಳನ ಮಾಡುವ ಚಿತ್ರವೊಂದನ್ನು ಪ್ರಕಟಿಸಿದ್ದ. ಇದಕ್ಕೆ ಹಲವು ರೀತಿಯ ಕೆಟ್ಟ ರೀತಿಯ ಪ್ರತಿಕ್ರಿಯೆ ಬಂದಿದ್ದು, ಸಿಎಂ ಕುಮಾರಸ್ವಾಮಿ ಅವರನ್ನು ನಿಂದಿಸುವಂತಿದೆ. ಆದ್ದರಿಂದ ಸಮಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಹಾಳು ಮಾಡುವ ಆಪಾದನೆ ಮೇಲೆ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಕೇಸ್ ದಾಖಲಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.
ರಾಜ್ಯ ಬಜೆಟ್ ನಂತರ ನಿರಂತರವಾಗಿ ಈ ರೀತಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸಲಾಗಿದೆ. ಬಜೆಟ್ ನಲ್ಲಿ ತಮ್ಮ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಹುದ್ದೆಗೆ ಅಪಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ದೂರಿದ್ದಾರೆ.