ದಿನದ ಸುದ್ದಿ

ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ; ಮನಸ್ಸು ಬದಲಿಸಿ ಮತ್ತೆ ದಡ ಸೇರಿದ

Published

on

ಸುದ್ದಿದಿನ, ಮಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಯುವಕನೊಬ್ಬ ಕೊನೇ ಕ್ಷಣದಲ್ಲಿ ಜ್ಞಾನೋದಯವಾಗಿ ಈಜಿ ದಡ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪ್ರೇಮ ವೈಫಲ್ಯದಿಂದ ಮನನೊಂದ ಮಂಜೇಶ್ವರದ ತೂಮಿನಾಡು ನಿವಾಸಿ ನೌಫಲ್, ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದ. ನಂತರ ತಕ್ಷಣ ಈಜಿ ಸೇತುವೆಯ ಪಿಲ್ಲರ್ ಬಳಿಗೆ ತೆರಳಿ ಪಿಲ್ಲರ್‌ನ ಸ್ಲ್ಯಾಬ್ ಮೇಲೆ ಕುಳಿತಿದ್ದಾನೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದು, ಆತನನ್ನು ಮೇಲಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದೆ. ಪ್ರೇಮ ವೈಫಲ್ಯಗೊಂಡ ಕಾರಣ ಸಾಯಲು ನಿರ್ಧರಿಸಿ ನದಿಗೆ ಹಾರಿದ್ದೆ. ಆದ್ರೆ ಕೊನೇ ಕ್ಷಣದಲ್ಲಿ ಸಾಯಲು ಮನಸ್ಸಾಗಿಲ್ಲ. ಬದುಕಿ ತೋರಿಸಬೇಕು ಅಂತಾ ಅನಿಸಿತು ಅಂತಾ ಹೇಳಿಕೆ ನೀಡಿದ್ದಾನೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version