Connect with us

ದಿನದ ಸುದ್ದಿ

ಮನಿಷಾ ಅತ್ಯಚಾರ-ಕೊಲೆ : ಆದಿತ್ಯನಾಥನ ಸರ್ಕಾರದಲ್ಲಿ ಹೆಚ್ಚುತ್ತಿವೆ ಅಪರಾಧಗಳು

Published

on

ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ಹತ್ರಾಸ್ ನಗರದಲ್ಲಿ 19 ವರ್ಷದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಮೇಲೆ ನಾಲ್ಕು ಮಂದಿ ಸವರ್ಣೀಯ ಯುವಕರಿಂದ ಅತ್ಯಾಚಾರಕ್ಕೊಳಗಾಗಿದ್ದ ಆಕೆ ಸೆಪ್ಟೆಂಬರ್ 29 ರಂದು ಸಾವನ್ನಪ್ಪಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಮನಿಷಾಳನ್ನು
ಸೆಪ್ಟೆಂಬರ್ 14 ರಂದು ಕ್ರೂರವಾಗಿ ಸವರ್ಣೀಯ ನಾಲ್ಕು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿ,ಅವಳ ನಾಲಿಗೆ ಕತ್ತರಿಸಿ, ಬೆನ್ನುಮೂಳೆಯ ಮುರಿದು ಪೈಶಾಚಿಕ ಕೃತ್ಯ ಎಸಗಿದ್ದರು.

ಅಲಿಘರ್ ನ ಆಸ್ಪತ್ರೆಯಲ್ಲಿ ಆರೋಗ್ಯವು ಸುಧಾರಿಸದಿದ್ದಾಗ ಬಾಲಕಿಯನ್ನು ನಿನ್ನೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಕೆಯನ್ನು ಬದುಕಿಸಲು ಪ್ರಯತ್ನಿಸಲಾಯಿತು. ಆದರೆ ಆಕೆ ಸುಮಾರು 15 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಳು. ದೆಹಲಿಯ ಸುಫ್ದರ್ ಜಂಗ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವಾಗ ಆಕೆಯ ನಾಡಿ ಬಡಿತ 52 ಕ್ಕೆ ತಲುಪಿದೆ. ಕೊನೆಗೆ ಆಂಬ್ಯುಲೆನ್ಸ್‌ನಲ್ಲಿ ಆಕೆ ಮೃತಪಟ್ಟಿದ್ದಾಳೆ.

ಈ ಹಿಂದೆ ಬಾಲಕಿಯನ್ನು ಅಲಿಘರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಅವಳ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣದ ಕಾರಣ ಮತ್ತು ಅಲ್ಲಿಯ ವೈದ್ಯರು “ಅವಳ ನಾಲಿಗೆ ಕತ್ತರಿಸಲ್ಪಟ್ಟಿತ್ತು ಮತ್ತು ಅವಳ ಬೆನ್ನುಹುರಿ ಮತ್ತು ಕುತ್ತಿಗೆ ಮುರಿದುಹೋಗಿತ್ತು ಮತ್ತು ಈ ತೀವ್ರ ಗಾಯಗಳಿಂದಾಗಿ ಮನಿಷಾ ಸೆಪ್ಟೆಂಬರ್ 29 ರಂದು ಬೆಳಗಿನ ಜಾವ ಮೃತಪಟ್ಟಳು ಎಂದಿದ್ದಾರೆ.

ಅಲಿಘರ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಫಕ್ರುಲ್ ಹೋಡಾ, ಆಕೆಯ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾದಾಗ ಮಾತ್ರ ಬೆನ್ನುಹುರಿಯ ಮೇಲೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗುತ್ತದೆ ಮತ್ತು ಯಾವುದೇ ಸುಧಾರಣೆಯವರೆಗೆ, ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲು ಸಾಧ್ಯವಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ ಅದು ಈಗ ಸಾಧ್ಯವಿಲ್ಲ.

ಮನಿಷಾಳ ಕುಟುಂಬದ ಹೇಳಿಕೆ ಪ್ರಕಾರ, ನಾಲ್ಕು ಜನರು ತಮ್ಮ ಗ್ರಾಮದ ಮೇಲ್ಜಾತಿಯವರಾಗಿದ್ದು ಇವರು ಈ ಮೊದಲು ಅನೇಕ ಹುಡುಗಿಯರು ಮತ್ತು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದರು. ನಾಲ್ವರ ಮೇಲೆ ಆರೋಪಿಗಳ ದೂರು ನೀಡಿದ್ದರೂ ಕೂಡ ಅವರ ವಿರುದ್ಧ ದೂರು ದಾಖಲಾಗಿಲ್ಲ ಎಂದಿದ್ದಾರೆ.

ಘಟನೆ ವಿವರ

ಮೊನಿಷಾ ತನ್ನ ತಾಯಿಯೊಂದಿಗೆ ಹುಲ್ಲು ಕತ್ತರಿಸಲು ಹೊಲಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ತಾಯಿಯಿಂದ 100 ಮೀಟರ್ ದೂರದಲ್ಲಿದ್ದಾಗ ಆಕೆಯನ್ನು ನಾಲ್ವರ ಗ್ಯಾಂಗ್‌
ದಾಳಿನಡೆಸಿ ಅವಳನ್ನು ‘ದುಪಟ್ಟಾ’ ದಿಂದ ಎಳೆದುಕೊಂಡು ಹೋಗಿದ್ದಾರೆ. ಮೊನಿಷಾ ತಾಯಿ ಹೇಳುವಂತೆ “ನಾನು ಅವಳಿಂದ 100 ಮೀಟರ್ ದೂರ ಕುಳಿತಿದ್ದೆ. ಕಾರಣ ಅವಳು ಕಿರುಚಾಡುವ ಧ್ವನಿ ಕೇಳಿಸಲಿಲ್ಲ” ಎಂದಿದ್ದಾರೆ.

ಪ್ರಕರಣ ದಾಖಲು

ಸಂದೀಪ್, ರಾಮು, ಲವ-ಕುಶ, ಮತ್ತು ರವಿ ಎಂಬ ಆರೋಪಿಗಳನ್ನು ಈಗ ಬಂಧಿಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ. ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು.‌‌ಈ ನಾಲ್ವರನ್ನು ಇಂಡಿಯನ್ ಸೆಕ್ಷನ್ ಅಡಿಯಲ್ಲಿ ಪರಿಗಣಿಸಬೇಕು ಮತ್ತು ಈ ಅಪರಾಧಕ್ಕೆ ಶಿಕ್ಷೆಯಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ‌.

ವೈದ್ಯರ ಹೇಳಿಕೆಯ ಪ್ರಕಾರ, ಬೆನ್ನುಹುರಿ ಶಾಶ್ವತವಾಗಿ ಹಾನಿಗೊಳಗಾಗಿತ್ತು ಮತ್ತು ನಿಷ್ಕರುಣೆಯಿಂದ ಎಳೆದಿದ್ದರಿಂದ ಅವಳ ಕುತ್ತಿಗೆಗೆ ಗಾಯಗಳಾಗಿದ್ದವು ಮತ್ತು ಅವರು ಅವಳ ನಾಲಿಗೆಯನ್ನು ಕತ್ತರಿಸಿದ್ದರು. ದೇಶದಲ್ಲಿ ಈ ತರದ ಘಟನೆಗಳು ಮರುಕಳಿಸಬಾರದೆಂದರೆ, ನಮ್ಮ ಘೋಷಣೆಗಳು ನಿಜವಾಗಿಯೂ ವ್ಯರ್ಥವಾಗುತ್ತವೆ. ಒಮ್ಮೆ ಇಂಥವರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಬಹುಶಃ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಬಹುದು ಎಂದಿದ್ದಾರೆ.

ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚು

ಆದಿತ್ಯನಾಥನ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಯುವತಿಯರು ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ, ಅದು ದಲಿತ ಸಮುದಾಯದ ಯುವತಿಯರೇ ಆಗಿದ್ದಾರೆ. ಈ ವರದಿಯಲ್ಲಿ, ಯುಪಿ ಯ ಲಖಿಂಪುರ್ ಖೇರಿ, ಅಪ್ರಾಪ್ತ ಬಾಲಕಿಯರು ತಮ್ಮ ಗ್ರಾಮದ ಹೊರಗೆ ಹೋದ ನಂತರ ಅತ್ಯಾಚಾರಕ್ಕೊಳಗಾದ ಅಥವಾ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅನೇಕ ಘಟನೆಗಳು ನಡೆದಿರುವುದು ದಾಖಲಾಗಿದೆ.

ಉತ್ತರ ಪ್ರದೇಶದಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು ರಾಷ್ಟ್ರೀಯ ಅಪರಾಧ ಬ್ಯೂರೋ ದತ್ತಾಂಶದ (ಎನ್‌ಸಿಆರ್‌ಬಿ) ವಾರ್ಷಿಕ ವರದಿಯು ಪ್ರತಿ ಎರಡು ಗಂಟೆಗಳಿಗೊಮ್ಮೆ ಯುಪಿ ಪೊಲೀಸರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿವೆ. ಪ್ರತಿ 90 ನಿಮಿಷಗಳಿಗೊಮ್ಮೆ ಮಗುವಿನ ವಿರುದ್ಧ ಅಪರಾಧವನ್ನು ರಾಜ್ಯದಲ್ಲಿ ಕಂಡುಬರುತ್ತಿದೆ. 2018 ರ ಲಭ್ಯವಿರುವ ಮಾಹಿತಿಯ ಪ್ರಕಾರ, ಹದಿನೆಂಟು ವರ್ಷದೊಳಗಿನ 144 ಬಾಲಕಿಯರು 2018 ರಲ್ಲಿ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಇತ್ತೀಚಿನ ಕೆಲವು ವರದಿಗಳು ಇಲ್ಲಿವೆ.

https://www.shethepeople.tv/news/17-year-old-raped-in-lakhimpur-kheri-up-crime/?

3-Year-Old Girl Raped And Murdered In Lakhimpur, UP: Report

13 year old Raped in UP. Her Tongue Cut, Eyes Hacked. Body Found in the Fields: Report

Hathras Rape Survivor is Another Nirbhaya. Why You Should Know Her

ಉತ್ತರಪ್ರದೇಶದಲ್ಲಿ ವಾಲ್ಮೀಕಿ ಸಮುದಾಯದ 'ಮನೀಷಾವಾಲ್ಮೀಕಿ' ಎಂಬ ಹುಡುಗಿಯ ಮೇಲೆ ಮೇಲ್ವಗ೯ದವರು ಎಂದು ಬೀಗುವ ಮನುವಾದಿ ಜನರು ಅತ್ಯಾಚಾರಗೈದು ಅವಳ…

Posted by ಡಾ.ಅನಿಲ್ ಆರ್ಯ on Tuesday, September 29, 2020

https://timesofindia.indiatimes.com/city/delhi/live-updates-hathras-gangrape-victim-dies-in-delhi-hospital/liveblog/78384037.cms

https://m.timesofindia.com/tv/news/hindi/devoleena-bhattacharjee-kamya-panjabi-want-justice-for-hathras-rape-victim-manisha-valmiki-say-hangtherapist/amp_articleshow/78388773.cms

ಸುದ್ದಿದಿನ.ಕಾಂ| ವಾಟ್ಸಾಪ್| 9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending