Connect with us

ದಿನದ ಸುದ್ದಿ

ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ

Published

on

ಸುದ್ದಿದಿನ, ದಾವಣಗೆರೆ : ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಗೆ ಹೆಸರಾದ ಕನ್ನಡ ಪರ ಕಳಕಳಿಯ ಕ್ರೀಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರು ಮತ್ತೊಮ್ಮೆ ಗೆಲ್ಲಬೇಕು ಎಂದು ಸಾಹಿತಿ ಎನ್. ಟಿ ಎರ್ರಿಸ್ವಾಮಿ ಆಶಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎರಡನೇ ಬಾರಿಗೆ ಆಯ್ಕೆ ಬಯಸಿ ಏಪ್ರಿಲ್ 1 ರ ಬೆಳಗ್ಗೆ ನಾಮಪತ್ರ ಸಲ್ಲಿಸಿದ ಡಾ. ಮಂಜುನಾಥ್ ಕುರ್ಕಿಯವರ ಪರ ಅವರ ಅಭಿಮಾನಿಗಳಿಂದ ನಗರದ ಅಪೂರ್ವ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಾತ್ಯಾತೀತ ನಿಲುವಿನ ಮಂಜುನಾಥ್ ಕುರ್ಕಿಯವರ ಸೇವೆ ಮುಂದುವರಿಯಲು ಅವರನ್ನು ಮತ್ತೊಮ್ಮೆ ಗೆಲ್ಲಿಸಲು ಶ್ರಮಿಸೋಣ ಎಂದು ಅಜೀವ ಸದಸ್ಯರಲ್ಲಿ ಮನವಿ ಮಾಡಿದರು.

ಮಂಜುನಾಥ್ ಕುರ್ಕಿಯವರು ಎರಡನೇ ಬಾರಿಗೆ ಸ್ಪರ್ಧಿಸುತ್ತಿರುವ ಕುರಿತು ಕೆಲವರಲ್ಲಿ ಅಸಮಾಧಾನ ಇರಬಹುದು. ಆದರೆ ಅವರನ್ನೇ ನಾವು ಮತ್ತೊಮ್ಮೆ ಏಕೆ ಆಯ್ಕೆ ಮಾಡಬೇಕಿದೆ ಎಂಬುದಕ್ಕೆ ಅತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಾವಣಗೆರೆಯಲ್ಲೇ ಆಯೋಜಿಸಲು ಕನಸು ಕಂಡಿರುವ ಮಂಜುನಾಥ್ ಕುರ್ಕಿಯವರು ಅದಕ್ಕಾಗಿ ಕಳಕಳಿಯಿಂದ ಶ್ರಮಿಸಿದ್ದಾರೆ. ಮತ್ತೆ ಕಲ್ಯಾಣವೆಂಬ ಅದ್ಭುತ ಪರಿಕಲ್ಪನೆಯ ಮೂಲಕ ಸರ್ವ ಜನಾಂಗದ ಶಾಂತಿಯ ತೋಟವಾದ ಸಹಮತ ವೇದಿಕೆಯ ಅಸ್ತಿತ್ವಕ್ಕೆ ಕಾರಣರಾಗಿದ್ದಾರೆ ಎಂಬಿತ್ಯಾದಿ ಹತ್ತು ಅಂಶಗಳ ಮೂಲಕ ಮಂಜುನಾಥ್ ಕುರ್ಕಿಯವರ ಪುನರ್ ಆಯ್ಕೆಗೆ ಎರ್ರಿಸ್ವಾಮಿಯವರು ವಿನಂತಿಸಿದರು.

ಕನ್ನಡಪರ ಹೋರಾಟಗಾರರಾದ ನಾಗೇಂದ್ರ ಬಂಡಿಕರ್ ಮಾತನಾಡಿ, ದಾವಣಗೆರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಹಿಂದೆಂದಿಗಿಂತಲೂ ಈಗ ವಿಶೇಷವಾದ ಬೆಳವಣಿಗೆ ಮತ್ತು ಅಭಿವೃದ್ಧಿ ಉಂಟಾಗಿದೆ. ನೈಜ ಮತ್ತು ಎಲೆಮರೆಯ ಕಾಯಿಯಂತಹ ಸಾಧಕರು, ಸಾಹಿತಿಗಳು, ಕನ್ನಡಾಭಿಮಾನಿಗಳು, ಕಲಾವಿದರು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆ ತಂದು ಅವಕಾಶ ಕಲ್ಪಿಸಿದ ಮಂಜುನಾಥ್ ಕುರ್ಕಿಯವರ ಸೇವೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮುಂದುವರಿಯಲು ಅವರನ್ನು ಗೆಲ್ಲಿಸಬೇಕಿದೆ ಎಂದರು.

ಡಾ.ಮಂಜುನಾಥ ಕುರ್ಕಿ ಅವರು ನಾಮಪತ್ರ ಸಲ್ಲಿಸುತ್ತಿರುವುದು

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಮತ್ತು ಸಾರ್ವಜನಿಕರ ಬಳಿಗೆ ಕೊಂಡೊಯ್ದು ಪರಿಚಯಿಸಿದ ಮಂಜುನಾಥ್ ಕುರ್ಕಿಯವರನ್ನು ಕಸಾಪ ಮತದಾರರು ಗೆಲ್ಲಿಸಲೇಬೇಕು ಎಂದು ಪ್ರೊ. ಮುರಿಗೇಂದ್ರಪ್ಪ ಒತ್ತಾಯ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಸಾಪ ನಿರಟಪೂರ್ವ ಅಧ್ಯಕ್ಷ ಎ. ಆರ್. ಉಜ್ಜನಪ್ಪ, ಮಾಜಿ ಜಿಪಂ ಸದಸ್ಯ ಲಕ್ಷ್ಮಣ್ , ನ್ಯಾಮತಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ನಿಜಲಿಂಗಪ್ಪ, ಜಗಳೂರು ಕಸಾಪ ಅಧ್ಯಕ್ಷರಾದ ಹಜರತ್ ಅಲಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಡಿ. ಹಾಲಪ್ಪ, ಮಂಜುನಾಥ್ ರೆಡ್ಡಿ, ರೈತ ಮುಖಂಡ ಲಿಂಗರಾಜು, ಜಿ. ಆರ್ ಷಣ್ಮುಖಪ್ಪ , ವಿಜಯಲಕ್ಷ್ಮೀ ಅಕ್ಕಿ, ಎ. ಕೆ. ಭೂಮೇಶ್ ಹರಿಹರ, ಬಿ. ದಿಳ್ಳೆಪ್ಪ, ಎನ್. ಎಸ್. ರಾಜು ಮತ್ತಿತರರು ಮಂಜುನಾಥ್ ಕುರ್ಕಿಯವರ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿ ಬೆಂಬಲ ಘೋಷಿಸಿದರು.

ದಾಗಿನಕಟ್ಟೆ ಪರಮೇಶ್ವರಪ್ಪ, ಗಂಗಾಧರ ಬಿ ಎಲ್ ನಿಟ್ಟೂರ್ ಮತ್ತಿತರರು ಅಭ್ಯರ್ಥಿಯ ಪರವಾಗಿ ಮಾತನಾಡಿ ಮತಯಾಚಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮೇಯರ್ ವಸಂತಕುಮಾರ್, ಪತ್ರಕರ್ತ ಬಿ. ಎನ್. ಮಲ್ಲೇಶ್, ವಿಕರವೇ ರಾಜ್ಯಾಧ್ಯಕ್ಷ ಕೆ. ಜಿ ಯಲ್ಲಪ್ಪ, ಸಾಹಿತಿಗಳಾದ ಪಾಪುಗುರು, ಭಾನುವಳ್ಳಿ ಅಣ್ಣಪ್ಪ, ಕುಂದೂರು ಮಂಜಪ್ಪ, ಓಂಕಾರಯ್ಯ ತವನಿಧಿ, ಕಡದಕಟ್ಟೆ ತಿಮ್ಮಪ್ಪ, ಬಸವರಾಜಪ್ಪ, ಜಿ. ಪಂ. ಮಾಜಿ ಸದಸ್ಯೆ ಶ್ರೀಮತಿ ಸಹನಾ ರವಿ, ಹರಿಹರ ಉಮ್ಮಣ್ಣ, ವಿಜಯ ಮಹಾಂತೇಶ್, ಎಂ. ವಿ ಹೊರಕೆರೆ, ರಾಮಣ್ಣ ಎಸ್. ನಿಟ್ಟೂರು ಸಿದ್ದಪ್ಪ, ಶಿವಾಜಿ ಪಾಟೀಲ್, ಸಿರಿಗೆರೆ ಸಿದ್ದಣ್ಣ.

ಮುಚ್ಚನೂರು ನಂಜಪ್ಪ, ಪರಮೇಶ್ವರಪ್ಪ, ನ್ಯಾಮತಿ ಹಾಲಾರಾಧ್ಯ, ವಿಜಯೇಂದ್ರ ಮಹೇಂದ್ರಕರ್, ಜಿ. ಎಂ ಬಸವರಾಪ್ಪ, ತೀರ್ಥಪ್ಪ ಕುಂಬಾಸ್, ಯುನಸ್ ಬಾಷಾ, ಕೆ. ಬಸವರಾಜಪ್ಪ, ಮಂಜುನಾಥ್, ಕೆ. ಶಿವಶಂಕರ್, ಹೆಚ್. ಎನ್. ಶಿವಕುಮಾರ್, ಎಸ್. ಮಲ್ಲಿಕಾರ್ಜುನ, ಜಿ. ಹೆಚ್.ಲಿಂಗರಾಜ್. ಡಾ.ಕೆ.ಷಣ್ಮುಖ, ಎಂ ತಿಪ್ಪಣ್ಣ, ಎಂ. ಡಿ ಶಿವಕುಮಾರ್, ಹೆಚ್ ಡಿ. ಪ್ರಭುದೇವ್, ಡಾ. ಬಿ. ಪಿ ಕುಮಾರ್. ಕೆ. ಸಿ ಬಸವರಾಜ್, ಪ್ರೊ. ಪರಶುರಾಮ, ಬೆಳವನೂರು ನಾಗರಾಜು, ಎಂ. ಎನ್ ಗೋಪಾಲ್ ರಾವ್, ಜಿ. ಬಿ. ಸುರೇಶ್.

ಕೆ. ಪಿ ಧಣಿ, ಕೆ.ನಾಗರಾಜು, ಎ. ಸಿ ಪ್ರಭಾಕರ್, ಕೆ. ಆರ್ ಮರುಳಸಿದ್ದಪ್ಪ, ಕೆ. ನಾಗಪ್ಪ ಕುರ್ಕಿ, ಎಸ್. ಎಂ. ನಾಗರಾಜು, ರುದ್ರೇಶ್, ಮಧು ಬೇತೂರು, ಜಿ. ಸಿ ನೀಲಾಂಬಿಕಾ, ಎಂ ರೂಪಶ್ರೀ, ಎ. ಆರ್ ರೇವಣಸಿದ್ದಪ್ಪ, ಎ. ಆರ್ ತೋಟಪ್ಪ, ಅನಂತ್, ಎಸ್ ಬಿ ರುದ್ರೇಗೌಡ, ಜಗದೀಶ್, ಕೆ. ಕಲ್ಲಪ್ಪ ,ಎ. ಯು. ಅರವಿಂದ , ಶೈಲಾ ತಿಮ್ಮೇಶ್, ಚೇತನಾ ಮಂಜುನಾಥ್, ಭಾರತಿ ಕರಿಬಸಪ್ಪ.

ಚನ್ನಗಿರಿ ತಾಲ್ಲೂಕಿನ ತಿಪ್ಪೇಸ್ವಾಮಿ, ವೈ ಚಂದ್ರಣ್ಣ, ಕೀಲು ಕುದುರೆ ಬಸವರಾಜು, ಜಿ. ಹನುಮಂತಾಚಾರ್, ವಿಠೋಬರಾವ್ ನಲ್ವಡಿ. ಮೆಹಬೂಬ್ ಅಲಿ. ಶಾಂತಮ್ಮ, ರಾಜಣ್ಣ ನಿಬಗೂರು, ಕಸಾಪ ಪದಾಧಿಕಾರಿಗಳು, ಕನ್ನಡ ಪರ ಹೋರಾಟಗಾರರು, ಕಸಾಪ ಅಜೀವ ಸದಸ್ಯರು ಸೇರಿದಂತೆ ಡಾ. ಮಂಜುನಾಥ್ ಕುರ್ಕಿಯವರ ಇನ್ನೂ ಇನ್ನೂರಕ್ಕೂ ಹೆಚ್ಚು ಬೆಂಬಲಿಗರು ಭಾಗವಹಿಸಿ ಶುಭ ಕೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಈ ಜಿಲ್ಲೆಗಳ ಜತೆಗೆ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಮೇತ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆ ತೀವ್ರತೆ ಹೆಚ್ಚಾಗಲಿದ್ದು, ಇದೇ 20ರ ವರೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿವೇಳೆ ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ನಿನ್ನೆ ರಾತ್ರಿ ಶಿವಮೊಗ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಕೊಪ್ಪಳ, ಹಾವೇರಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ ಸಿಡಿಲು ಬಡಿದು, ಓರ್ವ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ವರ್ಷಧಾರೆ ಉತ್ತಮವಾಗಿದ್ದು, ರೈತರಲ್ಲಿ ಸಂತಸ ಉಂಟುಮಾಡಿದೆ. ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕು ಗೊಂಡಿರುವ ಬಗ್ಗೆ ನಮ್ಮ ಪ್ರತಿನಿಧಿಗಳು ವರದಿ ಮಾಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಪರಿಹಾರವನ್ನು ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ಗಳಿಗೆ ಭೇಟಿ ನೀಡಿ, ಹಣ ಪಾವತಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದ್ದಾರೆ.

ಇದರ ಜತೆಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂಪಾಯಿ ವರೆಗೆ ರಾಜ್ಯ ಸರ್ಕಾರದ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಹಾವೇರಿ ಜಿಲ್ಲಿಯಲ್ಲಿ ಒಂದು ಲಕ್ಷ 98 ಸಾವಿರದ 455 ರೈತರಿಗೆ 9 ಹಂತದಲ್ಲಿ 37 ಕೋಟಿ 73 ಲಕ್ಷ ರೂಪಾಯಿ ಪರಿಹಾರದ ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಗದಗ ಜಿಲ್ಲೆಯಲ್ಲಿ ಕಳೆದ ಸಾಲಿನ ಹಂಗಾಮಿನಲ್ಲಿ ಬೆಳೆಹಾನಿಗೆ ಒಂದು ಲಕ್ಷದ 13 ಸಾವಿರದ 328 ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ತಿಳಿಸಿದ್ದಾರೆ.

ರೈತರು ತಮ್ಮ ಖಾತೆಗೆ ಹಣ ಜಮೆಯಾಗಿರುವ ಬಗ್ಗೆ ಸಹಾಯವಾಣಿಯ ಮೂಲಕ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ.

ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜತೆಗೆ, ದೊಡ್ಡ ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಿಂದ 24 ನಾಮಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ 18 ನಾಮಪತ್ರಗಳು ಸಲ್ಲಿಕೆಯಾದರೆ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 11 ನಾಮಪತ್ರಗಳು, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 7 ನಾಮಪತ್ರಗಳು, ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದಿಂದ 12ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 13 ನಾಮಪತ್ರಗಳು ನಿನ್ನೆ ಸಲ್ಲಿಕೆಯಾಗಿದ್ದವು.

ಇದುವರೆಗೆ ಒಟ್ಟು 103 ಅಭ್ಯರ್ಥಿಗಳಿಂದ 156 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಸಂಜೆ ವೇಳೆಗೆ ಅಂತಿಮವಾಗಿ ಕಣದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಾಗುವುದು. ನಾಮಪತ್ರ ವಾಪಸ್ ಪಡೆಯಲು ಇದೇ 20ರಂದು ಕೊನೆಯ ದಿನವಾಗಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಜೂನ್ 3 ರಂದು ಮತದಾನ ನಡೆಯಲಿದೆ. ಮತದಾನದ ಸಂಬಂಧ ಚಿತ್ರದುರ್ಗ ಜಿಲ್ಲೆಯ ಮತದಾನ ಕೇಂದ್ರಗಳ ಪಟ್ಟಿಯನ್ನು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಿಸಿದರು. ಜಿಲ್ಲೆಯಲ್ಲಿ ಒಟ್ಟು 7 ಮತದಾನ ಕೇಂದ್ರಗಳಿವೆ.

ಮೊಳಕಾಲ್ಮೂರು ತಾಲೂಕಿನ ಶಿಕ್ಷಕರ ಮತದಾರರು ಮೊಳಕಾಲ್ಮೂರು ಪಟ್ಟಣದ ತಾಲೂಕು ಆಡಳಿತ ಕೇಂದ್ರದಲ್ಲಿ ಮತ ಚಲಾಯಿಸಬಹುದು. ಚಳ್ಳಕೆರೆ ನಗರದ ಬಿ.ಎಂ.ಜಿ.ಎಚ್.ಎಸ್ ಶಾಲೆ, ಚಿತ್ರದುರ್ಗ ನಗರದ ಬಾಲಕಿಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ 1, ಕೋಠಡಿ 2 ರಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಿರಿಯೂರು ನಗರದ ತಾಲೂಕಿನ ಕಚೇರಿಯಲ್ಲಿ, ಹೊಸದುರ್ಗ ಪಟ್ಟಣ ತಾಲೂಕು ಕಚೇರಿಯ ಸಭಾಂಗಣದಲ್ಲಿ ಹೊಳಲ್ಕರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮತಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಕ ಮತದಾರರು ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 4 ಸಾವಿರದ 615 ಶಿಕ್ಷಕ ಮತದಾರರು ಇದ್ದಾರೆ ಎಂದು ಅವರು ಅಂಕಿ-ಅಂಶ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಾನಗಳ ವಿವರ ಇಂತಿವೆ

7ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1, 8 ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-2. ಪ್ರವರ್ಗ-1 ರಲ್ಲಿ ಹೆಣ್ಣು-1, 2ಎ ರಲ್ಲಿ ಹೆಣ್ಣು-1, 3ಬಿ ಯಲ್ಲಿ ಗಂಡು-1 ಹಾಗೂ 9ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1. ಪ.ವರ್ಗದಲ್ಲಿ ಹೆಣ್ಣು- 5 ಒಟ್ಟು 12 ಸ್ಥಾನಗಳು ಖಾಲಿಯಿರುತ್ತವೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಸ್ಥಾನ ಲಭ್ಯವಿರುವುದಿಲ್ಲ.

ಮೇಲ್ಕಾಣಿಸಿದ ಖಾಲಿ ಸ್ಥಾನಗಳನ್ನು ಹೊರತು ಪಡಿಸಿ ಇತರೆ (ಲಿಂಗ, ಜಾತಿ) ಆಸಕ್ತಿಯಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ, ವಸತಿ ಶಾಲೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಲಿಯಾಗಬಹುದಾದ ಸ್ಥಾನಗಳಿಗೆ ಹೆಚ್ಚುವರಿ ಆಯ್ಕೆಪಟ್ಟ(Waiting List) ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ದಾಖಲಾತಿಗೆ ಪರಿಗಣಿಸಲಾಗುವುದು.

ಅರ್ಜಿಗಳನ್ನು ಸಮೀಪದ ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್, ಪ್ರತಿಭಾನ್ವಿತ ಹೆಣ್ಣುಮಕ್ಕಳ ವಸತಿ ಶಾಲೆಗಳಲ್ಲಿ ಮೇ.17 ರಿಂದ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ.31 ರೊಳಗಾಗಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿ ಕಡ್ಡಾಯವಾಗಿ ಸಲ್ಲಿಸುವುದು. ಜೂನ್ 5ರಂದು ಮೊರಾರ್ಜಿದೇಸಾಯಿ ವಸತಿ ಶಾಲೆ ದೇವರಬೆಳಕೆರೆ, ಹರಿಹರ ತಾಲ್ಲೂಕು ಇಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending