ದಿನದ ಸುದ್ದಿ

ಜುಲೈ 1ರಿಂದ ಏಕಬಳಕೆಯ ಪ್ಲಾಸ್ಟಿಕ್ ತಯಾರಿಕೆ ; ಆಮದು ನಿಷೇಧ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016 ರ ಪ್ರಕಾರ ಪಾಲಿಸ್ಟ್ರೆರೀನ್ ಮತ್ತು ವಿಸ್ತರಿತ ಪಾಲಿಸ್ಟ್ರೆರೀನ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಸ್ಟಿಕ್‍ಗಳೊಂದಿಗೆ ಇಯರ್ ಬಡ್‍ಗಳು, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸಕ್ರೀಮ್ ಸ್ಟಿಕ್‍ಗಳು ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟ್ರೆರೀನ್ (ಥರ್ಮಾಕೋಲ್). ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು ಮತ್ತು ಲೋಟಗಳು, ಪೋರ್ಕ್‍ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್‍ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‍ಗಳು, 100 ಮೈಕ್ರಾನ್‍ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ Pಗಿಅ ಬ್ಯಾನರ್‍ಗಳು, ಪ್ಲಾಸ್ಟಿಕ್ ಸ್ಟಿರರ್‍ಗಳು.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಒoಇಈ ಮತ್ತು ಅಅ) ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್‍ಲೈನ್‍ಗಳ ಪ್ರಕಾರ ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‍ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ಕಾಲೇಜುಗಳು/ ಕಛೇರಿ ಸಂಕೀರ್ಣಗಳು/ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆ ತಿಳಿಸಲು ಸೂಚನೆಯನ್ನು ನೀಡಲಾಗಿದೆ.

2022 ಜೂನ್ 30ರೊಳಗೆ ಮೇಲೆ ತಿಳಿಸಲಾದ ಏಕಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳಿಂದ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಎಲ್ಲಾ ಇ-ಕಾಮರ್ಸ್ ಕಂಪನಿಗಳ ವೆಬ್‍ಸೈಟ್‍ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಮಾರಾಟ ಮತ್ತು ಪ್ರದರ್ಶನ/ಜಾಹೀರಾತುಗಳನ್ನು ಕೂಡ ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮೇಲಿನ ಆದೇಶವನ್ನು ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳಾದ ಮಾಲ್‍ಗಳು/ ಮಾರುಕಟ್ಟೆ ಸ್ಥಳ/ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸಿ ಸ್ಥಳಗಳು/ಶಾಲೆಗಳು/ ಕಾಲೇಜುಗಳು/ಕಛೇರಿಗಳು, ಆಸ್ಪತ್ರೆಗಳು ಮತ್ತು ಇತರ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮತ್ತು ಅಂತಹ ಕೈಗಾರಿಕೆಗಳಿಗೆ ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿ ಟನ್ ಗೆ ರೂ.5,000 ದಂತೆ ದಂಡ ವಿಧಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version