Connect with us

ದಿನದ ಸುದ್ದಿ

ಏಕಬಳಕೆಯ ಪ್ಲಾಸ್ಟಿಕ್ ತಯಾರಿಕೆ ; ಆಮದು ನಿಷೇಧ

Published

on

ಸುದ್ದಿದಿನ,ದಾವಣಗೆರೆ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016 ರ ಪ್ರಕಾರ ಪಾಲಿಸ್ಟ್ರೆರೀನ್ ಮತ್ತು ವಿಸ್ತರಿತ ಪಾಲಿಸ್ಟ್ರೆರೀನ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಸ್ಟಿಕ್‌ಗಳೊಂದಿಗೆ ಇಯರ್ ಬಡ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸಕ್ರೀಮ್ ಸ್ಟಿಕ್‌ಗಳು ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟ್ರೆರೀನ್ (ಥರ್ಮಾಕೋಲ್). ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಪೋರ್ಕ್ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ ಬ್ಯಾನರ್‌ಗಳು.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಒoಇಈ ಮತ್ತು ಅಅ) ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್‌ಲೈನ್‌ಗಳ ಪ್ರಕಾರ ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ಕಾಲೇಜುಗಳು/ ಕಛೇರಿ ಸಂಕೀರ್ಣಗಳು/ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆ ತಿಳಿಸಲು ಸೂಚನೆಯನ್ನು ನೀಡಲಾಗಿದೆ.

2022 ಜೂನ್ 30ರೊಳಗೆ ಮೇಲೆ ತಿಳಿಸಲಾದ ಏಕಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬAಧಿಸಿದ ಘಟಕಗಳಿಂದ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಎಲ್ಲಾ ಇ-ಕಾಮರ್ಸ್ ಕಂಪನಿಗಳ ವೆಬ್‌ಸೈಟ್‌ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಮಾರಾಟ ಮತ್ತು ಪ್ರದರ್ಶನ/ಜಾಹೀರಾತುಗಳನ್ನು ಕೂಡ ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮೇಲಿನ ಆದೇಶವನ್ನು ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳಾದ ಮಾಲ್‌ಗಳು/ ಮಾರುಕಟ್ಟೆ ಸ್ಥಳ/ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸಿ ಸ್ಥಳಗಳು/ಶಾಲೆಗಳು/ ಕಾಲೇಜುಗಳು/ಕಛೇರಿಗಳು, ಆಸ್ಪತ್ರೆಗಳು ಮತ್ತು ಇತರ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮತ್ತು ಅಂತಹ ಕೈಗಾರಿಕೆಗಳಿಗೆ ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿ ಟನ್ ಗೆ ರೂ.5,000 ದಂತೆ ದಂಡ ವಿಧಿಸಲಾಗುವುದು ಎಂದು ದಾವಣಗೆರೆ ಪ್ರಾ.ಕ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending