ದಿನದ ಸುದ್ದಿ

ಮಾಸ್ಕ್ ಮತ್ತು ದೈಹಿಕ ಅಂತರ ರೂಲ್ಸ್ ಬ್ರೇಕ್ ; 52,438 ಪ್ರಕರಣ ದಾಖಲು : ಎಸ್ಪಿ ಹನುಮಂತರಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ ಅಡಿಯಲ್ಲಿ ಇದುವರೆಗೆ 131 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಸ್ಕ್ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳದೇ ಇರುವ ಬಗ್ಗೆ 52,438 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಶನಿವಾರ ಅವರು ಮಾತನಾಡಿದರು.

ಇದನ್ನೂ ಓದಿ | ಕೋವಿಡ್ ಸಂಕಷ್ಟದಲ್ಲಿ ಗ್ರಾಮೀಣರ ನೆರವಿಗೆ ಉದ್ಯೋಗಖಾತ್ರಿ ಯೋಜನೆ , ಜಿಲ್ಲೆಯಲ್ಲಿ 4.90 ಲಕ್ಷ ಮಾನವ ದಿನ ಸೃಜನೆ : 16.18 ಕೋಟಿ ರೂ. ಕೂಲಿ ಪಾವತಿ

ವಿಪತ್ತು ನಿರ್ವಹಣಾ ಕಾಯ್ದೆಯಡಿ 1, ರೆಮಿಡೆಸಿವರ್ ಲಸಿಕೆ ಕುರಿತು 2 ಪ್ರಕರಣ ದಾಖಲಿಸಲಾಗಿದೆ. ಸಿಸಿಸಿ, ಆಕ್ಸಿಜನ್ ರೀಫಿಲ್ಲಿಂಗ್ ಸ್ಟೇಷನ್ ಇತರೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version