ದಿನದ ಸುದ್ದಿ
ಮಾಸ್ಕ್ ಕಡ್ಡಾಯ : ಸಚಿವ ಡಾ.ಕೆ.ಸುಧಾಕರ್
ಸುದ್ದಿದಿನ,ಬೆಂಗಳೂರು: ಜನರು ಕೋವಿಡ್ ಹೋಗಿದೆ ಎಂದು ಮಾಸ್ಕ್ ಧರಿಸುತ್ತಿಲ್ಲ. ಕೊರೋನಾ ಇನ್ಮೂ ಹೋಗಿಲ್ಲ. ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ ನಡೆಯಲಿದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ.
ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243